10:50 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿಸಿಆರ್‌ಟಿ ಸ್ಕಾಲರ್‌ಶಿಪ್‌ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆ: ಕರಾವಳಿಯಿಂದ ಭರತನಾಟ್ಯ ವಿಭಾಗದಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ

26/05/2025, 15:11

ಪುತ್ತೂರು(reporterkarnataka.com): ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್‌ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ)2022-23ನೇ ಸಾಲಿನ ಸ್ಕಾಲರ್‌ಶಿಪ್‌ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.)ಯ ವಿದ್ಯಾರ್ಥಿ ತೇಜಸ್ವಿರಾಜ್‌ ಆಯ್ಕೆಯಾಗಿದ್ದಾರೆ.
ಕರ್ನಾಟಕ ಕರಾವಳಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಸಿಸಿಆರ್‌ಟಿ
ಸ್ಕಾಲರ್‌ಶಿಪ್‌ಗೆ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಇವರಾಗಿದ್ದಾರೆ.
ಕಳೆದ 10 ವರ್ಷಗಳಿಂದ ಭರತನಾಟ್ಯ ಶಾಸ್ತ್ರೀಯ ನೃತ್ಯ ಅಭ್ಯಾಸ ಮಾಡುತ್ತಿರುವ ತೇಜಸ್ವಿರಾಜ್‌, 2018ರಲ್ಲಿ ಜೂನಿಯರ್‌, 2021ರಲ್ಲಿ ಸೀನಿಯರ್‌ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಈ ವರ್ಷ ವಿದ್ವತ್‌ ಪೂರ್ವ ಪರೀಕ್ಷೆ ಬರೆಯುತ್ತಿದ್ದಾರೆ. ತೇಜಸ್ವಿರಾಜ್‌ ಅವರು ನೃತ್ಯೋಪಾಸನಾ ಕಲಾ ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ ಅವರ ಮಾರ್ಗದರ್ಶನದಲ್ಲಿ ಭರತನಾಟ್ಯ ತರಬೇತಿ ಪಡೆಯುತ್ತಿದ್ದಾರೆ.
ಈ ಕಲಾ ಅಕಾಡೆಮಿಯ ನೃತ್ಯ ಕಲಾವಿದರಾದ ತೇಜಸ್ವಿರಾಜ್‌, ದಕ್ಷಿಣ ಕನ್ನಡ,ಕೇರಳ ಹಾಗೂ ಹೊರ ರಾಜ್ಯಗಳಲ್ಲೂ ಕಲಾ ತಂಡದೊಂದಿಗೆ ಹಲವು ನೃತ್ಯ ಪ್ರದರ್ಶನ ನೀಡಿದ್ದಾರೆ.
ಕಡಬ ತಾಲೂಕಿನ ಮರ್ದಾಳದ ಕೋಲಂತಾಡಿ ನಿವಾಸಿಯಾದ ತೇಜಸ್ವಿರಾಜ್‌ ಅವರ ತಂದೆ ದಿವಂಗತ ಶಾಂತರಾಮ ಗೌಡ, ತಾಯಿ ಲಕ್ಷ್ಮಿ. ಮರ್ದಾಳ ತುಂಬ್ಯ ಗುಡ್‌ಶೆಫರ್ಡ್‌ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ,ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಪ್ರೌಢ,ರಾಮಕುಂಜದ ಶ್ರೀರಾಮಕುಂಜೇಶ್ವರ ಪಿಯು ಕಾಲೇಜಿನಲ್ಲಿ ಪಿಯುಸಿ(ಶೇ.93),ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ವಾಣಿಜ್ಯ ಪದವಿ(ಶೇ.91) ವ್ಯಾಸಂಗ ಪೂರೈಸಿದ್ದಾರೆ.
ಪ್ರಸಕ್ತ ಸಿಎ ಆರ್ಟಿಕಲ್‌ಶಿಪ್‌ನ್ನು ಪುತ್ತೂರಿನಲ್ಲಿ ಸಿಎ ಅರವಿಂದಕೃಷ್ಣ ಅವರಲ್ಲಿ ಮಾಡುತ್ತಿದ್ದು,ಅಂತಿಮ ಸಿಎ ಕೂಡ ಕಲಿಯುತ್ತಿದ್ದಾರೆ.
ಭಾರತ ಸರ್ಕಾರದ ಸಾಂಸ್ಕೃತಿಕ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರದ ಯುವ ಕಲಾವಿದರನ್ನು ಪ್ರೋತ್ಸಾಹಿಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿ, ಸಂದರ್ಶನ ನಡೆಸಿ ಸ್ಕಾಲರ್‌ಶಿಪ್‌ಗೆ ಆಯ್ಕೆ ನಡೆಸುತ್ತದೆ. 2022-23ನೇ ಸಾಲಿನ ಆಯ್ಕೆ ಪ್ರಕ್ರಿಯೆ ಕಳೆದ ಅಕ್ಟೋಬರ್‌ನಲ್ಲಿ ನಡೆದಿದ್ದು, ಈಗ ಫಲಿತಾಂಶ ಪ್ರಕಟಿಸಲಾಗಿದೆ.
ಕರ್ನಾಟಕದಲ್ಲಿ ಭರತನಾಟ್ಯದಲ್ಲಿ ಒಟ್ಟು ಏಳು ಮಂದಿ ಸ್ಕಾಲರ್‌ಶಿಪ್‌ಗೆ
ಆಯ್ಕೆಯಾಗಿದ್ದು, ಬೆಂಗಳೂರಲ್ಲಿ ಐವರು, ಶಿವಮೊಗ್ಗದಲ್ಲಿ ಓರ್ವ ಮತ್ತು ದ.ಕ.ದಲ್ಲಿ ತೇಜಸ್ವಿರಾಜ್‌ ಸೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು