ಇತ್ತೀಚಿನ ಸುದ್ದಿ
ಕೊಟ್ಟಿಗೆಹಾರ: ಗಾಳಿ-ಮಳೆಗೆ ಮನೆ ಗೋಡೆ ಕುಸಿತ; ಪವಾಡಸದೃಶ ಮನೆಯವರು ಪ್ರಾಣಾಪಾಯದಿಂದ ಪಾರು
26/05/2025, 22:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಲೆನಾಡಿನಲ್ಲಿ ಗಾಳಿ-ಮಳೆಯ ಅಬ್ಬರ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ತೀವ್ರ ಪರಿಣಾಮ ಬೀರಿದೆ. ತರುವೆ ಗ್ರಾಮದಲ್ಲಿ ಸಂಭವಿಸಿದ ಭಾರೀ ಗಾಳಿ-ಮಳೆಗೆ ಲಕ್ಷ್ಮಿ ಎಂಬುವರಿಗೆ ಸೇರಿದ ಮನೆ ಗೋಡೆ ಭಾಗಶಃ ಕುಸಿದಿದೆ.
ಘಟನೆಯ ಸಮಯದಲ್ಲಿ ಮನೆಯೊಳಗಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂಜೆ ವೇಳೆಗೆ ಮಲೆನಾಡಿನಲ್ಲಿ ಮತ್ತೆ ಗಾಳಿ-ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜನಜೀವನಕ್ಕೆ ತೊಂದರೆಯಾಗಿದೆ.