12:37 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಮುಖ್ಯಮಂತ್ರಿ

27/05/2025, 23:56

ಬೆಂಗಳೂರು(reporterkarnataka.com): ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.
ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು.
ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.
ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.
ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.


ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು.
ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.
ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು