10:49 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Karnataka | 15441.17 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ

28/05/2025, 21:56

ಬೆಂಗಳೂರು(reporterkarnataka.com): ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಹೇಳಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5495 ಕೋಟಿ ರೂ. ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದರು.


ಸಭೆಯಲ್ಲಿ ಸಚಿವರಾದ ಎಂ. ಬಿ. ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು