12:27 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

Bantwal | ಬಾಳ್ತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಬಿಜೆಪಿಗೆ ಜಯ

29/05/2025, 12:21

ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಾಳ್ತಿಲ ಗ್ರಾಮ ಪಂಚಾಯತ್ ಗೆ ಉಪ ಚುನಾವಣೆ ನಡೆದಿದ್ದು,
ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿತಿನ್ ಕುಮಾರ್ ಜಯಗಳಿಸಿದ್ದಾರೆ.
ನಿತಿನ್ ಕುಮಾರ್ ಅವರಿಗೆ 419 ಮತ, ಕಾಂಗ್ರೆಸ್ ನ ಯೋಗೀಶ್ ಅವರಿಗೆ 187 ಮತ ಚಲಾವಣೆಯಾಗಿವೆ. 5 ಮತಗಳು ಅಸಿಂಧು ಆಗಿವೆ.
ನಿತಿನ್ ಕುಮಾರ್ 232 ಮತಗಳ ಅಂತರದ ಜಯ ಸಾಧಿಸಿದ್ದಾರೆ.
ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಅವರ ಬೂತ್ ನಲ್ಲೇ ನಡೆದ ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತಿರುವುದು, ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ 16 ಬಿಜೆಪಿ ಸದಸ್ಯರು ಆಯ್ಕೆಯಾಗಿರುವುದು ವಿಶೇಷ.
ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಅಣ್ಣು ಪೂಜಾರಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಉಪ ಚುನಾವಣೆ ನಡೆದಿತ್ತು.
ಮುಂದಿನ ಆರು ತಿಂಗಳ ಅವಧಿಗೆ ಈ ಸದಸ್ಯ ಸ್ಥಾನ ಇರಲಿದೆ.ನಂತರ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು