2:03 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಆಲಿ ಆಕ್ರೋಶ

29/05/2025, 23:01

ಮಂಗಳೂರು(reporterkarnataka.com):ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರಗಳ ಭಾಗವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಕೆಪಿಸಿಸಿ ಪ್ರಧಾನ
ಕಾರ್ಯದರ್ಶಿ ಇನಾಯತ್ ಅಲಿ ಹೇಳಿದ್ದಾರೆ.
ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವಂಹ ಕೆಲಸ ನಡೆದರೂ ರಾಜ್ಯದ ಗೃಹ ಇಲಾಖೆ ಈ ಬಗ್ಗೆ ಗಮನ ಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಹಾಗಾಗಿ, ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ. ಸರಕಾರ ದ್ವೇಷ ಭಾಷಣಕಾರರು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಿ ಇಲ್ಲಿನ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಹೊರತಾಗಿ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣವನ್ನು ನಿರ್ಮಿಸಿ ಕೊಡಬೇಕು. ಈ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು