6:56 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

New Delhi | ಪೌರ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ತುರ್ತು ಕ್ರಮ ವಹಿಸಿ; ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ

31/05/2025, 22:49

ನವದೆಹಲಿ(reporterkarnataka.com): ಪೌರ ಕಾರ್ಮಿಕರ ಬೇಡಿಕೆಗಳನ್ನು ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ರಾಜ್ಯಾದ್ಯಂತ ನಡೆಯುತ್ತಿರುವ ಪೌರಕಾರ್ಮಿಕರ ಮುಷ್ಕರವನ್ನು ರಾಜ್ಯ ಕಾಂಗ್ರೆಸ್ ಸರಕಾರವು ಸ್ವಚ್ಛತೆ, ನೈರ್ಮಲ್ಯ ಅಂಶಗಳ ಜತೆಗೆ ಮಾನವೀಯ ಆಯಾಮದಿಂದಲೂ ನೋಡಬೇಕು ಎಂದು ಸಲಹೆ ಮಾಡಿದ್ದಾರೆ.
ಸಮಾಜದ ಸ್ವಾಸ್ಥ್ಯ ಕಾಪಾಡುವ ಯೋಧರಾಗಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುವ ಇವರ ಸೇವೆಯನ್ನು ಸರಕಾರ ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಲ್ಲೆಡೆ ರಾಶಿರಾಶಿ ಕಸ ಬೀಳುತ್ತಿದೆ ಎಂಬುದನ್ನು ಅವರು ಗಮನಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು