6:26 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Karnataka | ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ವಿಷಾದ

03/06/2025, 19:29

ಗದಗ(reporterkarnataka.com): ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು.
ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು.
ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ‌ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಅವರು ನುಡಿದರು.


ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ‌ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ‌ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ‌ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು. ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.
ಅದಕ್ಕೇ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು