10:05 AM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ ಮುಖ್ಯಮಂತ್ರಿ ಆದೇಶ

04/06/2025, 21:29

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು:


• ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.

• ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ. ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

• ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

• ನಿನ್ನೆ ತಡರಾತ್ರಿವರೆಗೂ ಐಪಿಎಲ್ ಫೈನಲ್ ಪಂದ್ಯ ನಡೆದಿತ್ತು. ಕ್ರಿಕೆಟ್ ಅಸೋಸಿಯೇಶನ್ ಅವರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜಿಸಲಾಗಿತ್ತು.

• ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ದುಃಖ ವ್ಯಕ್ತಪಡಿಸುತ್ತದೆ.

• ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ.

• ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು.

• ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ. ಈ ದುರಂತ ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ಅತ್ಯಂತ ಹೆಚ್ಚಿನ ದುಃಖ ವ್ಯಕ್ತಪಡಿಸುತ್ತದೆ.

• ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ; ಅವರ ಕುಟುಂಬ ವರ್ಗ, ವಾರೀಸುದಾರರಿಗೆ, ಪೋಷಕರಿಗೆ ಸಾವಿನ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

• ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು