11:25 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

New Delhi | ಕಾಲ್ತುಳಿತಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪ

04/06/2025, 22:02

ನವದೆಹಲಿ(reporterkarnataka.com): ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು