11:32 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬೆಂಗಳೂರು ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ತಂಡ ಪರಿಹಾರ ಕೊಡಲು ಆಗ್ರಹ

05/06/2025, 13:08

ಮಂಡ್ಯ/ ಬೀದರ್ (reporterkarnataka.com): ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ 11 ಜನ ಮೃತಪಟ್ಟಿದ್ದು ದುರದೃಷ್ಟಕರ, ಮೃತರ ಕುಟುಂಬಗಳಿಗೆ ಆರ್ ಸಿಬಿ ತಂಡ ಕೂಡ ಪರಿಹಾರ ಕೊಡಬೇಕು ಎಂದು ಶಾಸಕರಾದ ಮಂಡ್ಯದ ದಿನೇಶ ಗೂಳಿಗೌಡ ಹಾಗೂ ಬೀದರ್ ನ ಭೀಮರಾವ್ ಪಾಟೀಲ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಐಪಿಎಲ್ ಫೈನಲ್ ನಲ್ಲಿ ವಿಜಯಿಯಾಗಿರುವ ಆರ್ ಸಿಬಿ ತಂಡವನ್ನು ನೋಡಲು, ಅವರನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮಂಗಳವಾರ ರಾತ್ರಿಯೇ ರಾಜ್ಯದ ಮೂಲೆ, ಮೂಲೆಗಳಿಂದ ಬೆಂಗಳೂರಿಗೆ ಬಂದಿದ್ದರು.
ಬುಧವಾರ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದಾರೆ. ಆರ್ ಸಿಬಿ ಕೋಟ್ಯಂತರ‌ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದೆ. ಐಪಿಎಲ್ ಗೆಲುವಿನಿಂದ ಕೋಟ್ಯಾಂತರ ಹಣ ಗಳಿಸಿದೆ. ಅಭಿಮಾನಿವಳ ರಕ್ಷಣೆ ಅವರದ್ದೂ ಜವಾಬ್ದಾರಿ. ಆದರೆ ಆರ್ ಸಿಬಿಯಾಗಲಿ ಅಥವಾ ಕೆಸಿಎ ಆಗಲಿ ಯಾವುದೇ ಪರಿಹಾರ ಘೋಷಿಸಿಲ್ಲ.‌
ಇಂಥ ದುರಂತದ‌ ಸಂದರ್ಭದಲ್ಲಿ ಮಾನವೀಯತೆ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಶಾಸಕದ್ವಯರು ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು