2:21 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಇಂದಿರಾ ಕ್ಯಾಂಟೀನ್ ದೇಶದಲ್ಲಿಯೇ ಮಾದರಿ: ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

05/06/2025, 19:58

ಮಂಗಳೂರು (reporterkarnataka.com): ಇಂದಿರಾ ಕ್ಯಾಂಟೀನ್‍ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
ಸಚಿವರು ಮೂಡಬಿದ್ರೆಯಲ್ಲಿ ಮಾತನಾಡಿ ಸರ್ಕಾರದ ಯೋಜನೆಗಳ ಲಾಭವು ನೇರವಾಗಿ ಬಡವರಿಗೆ ತಲುಪಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಧ್ಯೇಯವಾಗಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಲ್ಯದಲ್ಲಿ ತಾವು ಅನುಭವಿಸಿದ ಹಸಿವಿನ ಸಂಕಟವನ್ನು ಗಮನದಲ್ಲಿಟ್ಟುಕೊಂಡು ಬಡಜನರು ಮತ್ತು ದುರ್ಬಲರು ಹಸಿವಿನಿಂದ ಇರಬಾರದು ಮತ್ತು ಸರಕಾರದ ಯೋಜನೆಗಳ ಲಾಭ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರು ಎಂದು ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪ್ರಥಮ ಅವಧಿಯಲ್ಲಿ ರಾಜ್ಯದ ವಿವಿಧೆಡೆ ಇಂದಿರಾ ಕ್ಯಾಂಟೀನ್‍ಗೆ ಚಾಲನೆ ನೀಡಿದರು. ರಾಜ್ಯದ ಎಲ್ಲಾ ಪ್ರಮುಖ ಪೇಟೆ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ 4 ಕಡೆ ಇಂದಿರಾ ಕ್ಯಾಂಟೀನ್ ಮಂಜೂರಾಗಿದ್ದು ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿಯಲ್ಲಿ ಇಂದು ಚಾಲನೆಗೊಂಡಿದೆ. ಬಜಪೆಯಲ್ಲಿ ಶೀಘ್ರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳಲಿದೆ ಎಂದು ಅವರು ತಿಳಿಸಿದರು.

ಅಭಿವೃದ್ಧಿಯಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಸಮಾನವಾಗಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ಸಮಾರಂಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಜಿ., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಮೂಡಬಿದ್ರೆ ಪುರಸಭೆ ಅಧ್ಯಕ್ಷೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು