10:53 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಾಂತಿ ಮರುಸ್ಥಾಪನೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರ ಜತೆ ಚರ್ಚೆ

06/06/2025, 12:29

ಮಂಗಳೂರು(reporterkarnataka.com): ದ.ಕ.ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಭೇಟಿ ಮಾಡಿ ಸಲಹೆ ಪಡೆಯಿತು.
ಈ ಸಂದರ್ಭ ಕೋಮು ಘರ್ಷಣೆಗಳಿಂದ ಜಿಲ್ಲೆಯ ಅಭಿವೃದ್ಧಿ ಮೇಲಾದ ಪರಿಣಾಮ, ಜಿಲ್ಲೆಯಲ್ಲಿ ಶಾಂತಿ ಮರು ಸ್ಥಾಪನೆಗೆ ವಹಿಸಬೇಕಾದ ಕ್ರಮಗಳು, ಅಹಿತರ ಘಟನೆಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕ ಎನ್.ಎ ಹ್ಯಾರಿಸ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಗಡೆ ಅವರಿದ್ದ ಕೆಪಿಸಿಸಿ ನೀಯೋಗ ಅವಲೋಕನ ನಡೆಸಿತು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯ ಸಭಾ ಸದಸ್ಯರಾದ ಬಿ ಇಬ್ರಾಹಿಂ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಜಿ ಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಎಂ.ಎಸ್.ಮಹಮ್ಮದ್, ಮುಖಂಡರಾದ ಜಿ.ಕೃಷ್ಣಪ್ಪ ಸುಳ್ಯ, ಯು.ಕೆ.ಮೋನು, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು