8:23 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ 4 ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಹೆಸರು ಪ್ರಕಟ: ದಿನೇಶ್ ಅಮೀನ್ ಮಟ್ಟು, ಆರತಿಕೃಷ್ಣ, ಡಿ.ಜಿ. ಸಾಗರ್, ರಮೇಶ್ ಬಾಬುಗೆ ಅವಕಾಶ

06/06/2025, 21:25

ಬೆಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ನಲ್ಲಿ ತೆರವಾಗಿರುವ 4 ಸ್ಥಾನಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು, ಎನ್ ಆರ್ ಐ ಮಾಜಿ ಉಪಾಧ್ಯಕ್ಷೆ ಆರತಿಕೃಷ್ಣ, ದಲಿತ ಸಂಘರ್ಷ ಸಮಿತಿಯ ಡಿ.ಜಿ. ಸಾಗರ್ ಹಾಗೂ ಮಾಜಿ ಎಂಎಲ್ ಸಿ ರಮೇಶ್ ಬಾಬು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭ್ಯರ್ಥಿಯಾದರೆ, ಆರತಿಕೃಷ್ಣ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಭ್ಯರ್ಥಿ. ಉಳಿದ ಡಿ.ಜಿ. ಸಾಗರ್ ಹಾಗೂ ರಮೇಶ್ ಬಾಬು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಭ್ಯರ್ಥಿಯಾಗಿದ್ದಾರೆ. ತೆರವಾಗಿರುವ 4 ಎಂಎಲ್ ಸಿ ಸ್ಥಾನಕ್ಕಾಗಿ ಕಾಂಗ್ರೆಸ್ ನೊಳಗೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಸುಮಾರು ಎರಡು ಡಜನಿಗೂ ಅಧಿಕ ಅಕಾಂಕ್ಷಿಗಳು ಈ ಸ್ಥಾನಕ್ಕಾಗಿ ಟೆವಲ್ ಹಾಸಿದ್ದರು.
ಕಾಂಗ್ರೆಸ್ ನ ಹಿರಿಯ ನಾಯಕರಾದ ಬಿ.ಎಲ್. ಶಂಕರ್, ವಿ. ಸುದರ್ಶನ್ ಅವರ ಹೆಸರು ಕೂಡ ಕೇಳಿ ಬರುತ್ತಿತ್ರು. ಆದರೆ, ಅಂತಿಮವಾಗಿ ಈ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ದಿನೇಶ್ ಅಮೀನ್ ಮಟ್ಟು ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ದುಡಿದು ಸಾಕಷ್ಟು ಹೆಸರು ಪಡೆದವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿಯೂ ಕಾರ್ಯನಿರ್ವಹಿಸಿದ್ದರು. ಮಾಜಿ ಸಚಿವರ ಪುತ್ರಿಯಾದ ಆರತಿಕೃಷ್ಣ ಅವರು ಎನ್ ಆರ್ ಐಯಲ್ಲಿ ಸಾಕಷ್ಟು ಕೆಲಸ ಮಾಡಿದವರು. ಡಿ.ಜಿ. ಸಾಗರ್ ಅವರು ದಸಂಸದಲ್ಲಿ ಕೆಲಸ ಮಾಡಿದವರು. ಹಾಗೆ ರಮೇಶ್ ಬಾಬು ಅವರು ಮಾಜಿ ಎಂಎಲ್ ಸಿಯಾಗಿ ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು