9:04 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಸಚಿವ ಮಂಕಾಳ ಎಸ್. ವೈದ್ಯ ವಿತರಣೆ

08/06/2025, 11:52

ಮಂಗಳೂರು(reporterkarnataka.com): ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿ ಪರಿಹಾರ ವಿತರಿಸಿದರು.
ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವರು, ಪ್ರತಿ ಕುಟುಂಬಕ್ಕೆ ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿಗಳ ಚೆಕ್ ವಿತರಿಸಿದರು. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಇನ್ನೂ ನಡೆಯುತ್ತಿದೆ. ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ತಿಳಿಸಿದರು.
ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಕುಟುಂಬಗಳಿಗೆ ಇದುವರೆಗೆ 8 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ರಾಜ್ಯ ಸರಕಾರ ಇದನ್ನು 10 ಲಕ್ಷ ರೂ. ಗಳಿಗೇರಿಸಿದೆ ಎಂದು ಸಚಿವರು ತಿಳಿಸಿದರು.
ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ಧಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು