11:40 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ…

ಇತ್ತೀಚಿನ ಸುದ್ದಿ

Mangaluru | ಮೀನುಗಾರ ಜೀವನೋಪಾಯ ರಕ್ಷಿಸಲು ಸರಕಾರ ಬದ್ಧ: ಮಂಗಳೂರಿನಲ್ಲಿ ಸಚಿವ ಮಂಕಾಳ ವೈದ್ಯ

08/06/2025, 11:59

ಮಂಗಳೂರು(reporterkarnataka.com): ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ಶ ಮಂಗಳೂರಿನ ಕೋಸ್ಟ್‌ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.

ಸಚಿವರು ಮಾತನಾಡಿ, ಮೀನುಗಾರ ಸಮುದಾಯದ ಜೀವನೋಪಾಯವನ್ನು ರಕ್ಷಿಸಲು ಸರಕಾರ ಎಲ್ಲ ಕ್ರಮ ಕೈಗೊಳ್ಳಲಿದೆ. ಮೀನುಗಾರರು ತಮ್ಮ ಜೀವವನ್ನು ಪಣಕ್ಕಿಟ್ಟು ಮೀನುಗಾರಿಕೆಗೆ ತೆರಳುತ್ತಾರೆ. ಇವರ ಸುರಕ್ಷತೆ ನಮ್ಮೆಲ್ಲರ ಆದ್ಯತೆಯಾಗಿದೆ. ಸಮುದ್ರದಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಅಪಾಯಗಳನ್ನು ತಗ್ಗಿಸಲು ಎಲ್ಲರೂ ಕಟಿಬದ್ಧರಾಗಿರಬೇಕು ಎಂದು ಹೇಳಿದರು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು