3:52 PM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

ಮುಂದಿನ 3 ವರ್ಷದಲ್ಲಿ 60 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದನೆ: ದೊಡ್ಡಬಳ್ಳಾಪುರದಲ್ಲಿ ಸಿಎಂ ಘೋಷಣೆ

11/06/2025, 15:11

*ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ‌ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ*

*ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ: ಸಿ.ಎಂ*

*ನಮ್ಮ ಸರ್ಕಾರ 4 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ: ಬಿಜೆಪಿ ಉತ್ಪಾದನೆ ಹೆಚ್ಚಿಸಿದ್ದು ಸೊನ್ನೆ: ಸಿ.ಎಂ*

*ಕುಸುಮ್ ಹೆಸರಿಗಷ್ಟೇ ಕೇಂದ್ರದ ಯೋಜನೆ; ಕೇಂದ್ರ ಕೊಡುವುದು ಶೇ. 30ರಷ್ಟು ಮಾತ್ರ ಹಣ: ಸಿಎಂ*

ದೊಡ್ಡಬಳ್ಳಾಪುರ(reporterkarnataka.com): ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ.
ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ ನೀಡಿ, ‘ಲಿಪಿ-ಮನೆ’ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಇಂದು ನಾನು ಉದ್ಘಾಟನೆ ಮಾಡಿರುವ, 70 ಮೆವ್ಯಾ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ ಎಂದರು.
ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್ ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ ಎಂದು ಮೆಚ್ಚುಗೆ ಸೂಚಿಸಿದರು.
ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ. 50ರಷ್ಟು ಹಣ ಕೊಡುತ್ತದೆ. ಶೇ. 20ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ. 30ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ ಎಂದರು.
ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡ್ತೇವೆ ಎಂದು ವಿವರಿಸಿದರು.
ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ವಿವರಿಸಿದರು.


ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ ಎಂದರು.
ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರೆಸುತ್ತೇವೆ ಎಂದು ನುಡಿದರು.

*ಗೌರಿಬಿದನೂರಿಗೆ ಬಂಪರ್:*
ಮುಂದಿನ ಬಜೆಟ್ ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಗೆ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಭರವಸೆ ನೀಡಿದರು.
ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು