7:00 AM Thursday31 - July 2025
ಬ್ರೇಕಿಂಗ್ ನ್ಯೂಸ್
ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ… USA | ಡ್ರೈವರ್ ಇಲ್ಲದ ಕಾರಿನಲ್ಲಿ ಪ್ರಯಾಣಿಸಿದ ಸ್ಪೀಕರ್ ಯು.ಟಿ. ಖಾದರ್!: ಇದು… Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ…

ಇತ್ತೀಚಿನ ಸುದ್ದಿ

Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು, ಮಲೆನಾಡಿನಲ್ಲಿ ಶಾಂತಿ ಸ್ಥಾಪನೆಗೆ ಕ್ರಮ

11/06/2025, 21:15

ಬೆಂಗಳೂರು(reporterkarnataka.com): ಕರಾವಳಿ(ತುಳುನಾಡು) ಮತ್ತು ಮಲೆನಾಡು ಪ್ರದೇಶಗಳಲ್ಲಿ ಕೋಮುದ್ವೇಷ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಕೋಮು ನಿಗ್ರಹ ಪಡೆ ರಚಿಸಿದ್ದು, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಈ ವಿಶೇಷ ಪಡೆಯ ಪ್ರಭಾರ ಮುಖ್ಯಸ್ಥರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರಹೀಂ ಹತ್ಯೆಗಳ ಬೆನ್ನಲ್ಲೇ ಈ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಈಗ ಕಾಲ ಕೂಡಿ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಂಗಳೂರು ಕಮೀಷನರ್ ಅವರ ಕಾರ್ಯದಕ್ಷತೆಯ ಬಗ್ಗೆ ಆಕ್ಷೇಪಗಳು ಕೇಳಿ ಬಂದಿರುವುದರಿಂದ ಅವರನ್ನು ವರ್ಗಾವಣೆ ಮಾಡಿ ಹೊಸ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಹೊಸ ಅಧಿಕಾರಿಗಳು ಕೆಲವು ತ್ವರಿತ ಕ್ರಮಗಳನ್ನು ಕೈಗೊಂಡಿದ್ದಾರಾದರೂ, ಇದು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಅವರು ಈ ಹಿಂದೆ ಕೋಮು ನಿಗ್ರಹ ಪಡೆ ರಚನೆಯ ಬಗ್ಗೆ ಪ್ರಸ್ತಾಪಿಸಿದ್ದರೂ, ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈಗ 236 ಅಧಿಕಾರಿ-ಸಿಬ್ಬಂದಿಯನ್ನು ಒಳಗೊಂಡಂತೆ ಈ ವಿಶೇಷ ಪಡೆಗೆ ರಾಜ್ಯ ಪೊಲೀಸ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಈ ಪಡೆ ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿದೆ.
ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್)ಯಿಂದ ಡಿಐಜಿ ಸೇರಿ 240 ಹುದ್ದೆಗಳನ್ನು ಹಿಂಪಡೆದು ಈ ವಿಶೇಷ ಕಾರ್ಯಪಡೆ ರಚಿಸಲಾಗಿದೆ. ಇಬ್ಬರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ 236 ಮಂದಿಯನ್ನು ನಿಯೋಜಿಸಲಾಗಿದೆ. ಅಮಿತ್ ಸಿಂಗ್ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಕೋಮು ಸೂಕ್ಷ್ಮ ವಿಷಯಗಳಲ್ಲಿ ಸಾಮರಸ್ಯ ಸ್ಥಾಪಿಸುವ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭವಿಷ್ಯದಲ್ಲಿ ಕೋಮು ಸಂಘರ್ಷಗಳಿಲ್ಲದೇ ಶಾಂತಿ ಮತ್ತು ಸಹಬಾಳ್ವೆ ಕಾಪಾಡುವ ನಿರೀಕ್ಷೆ ಎಲ್ಲರಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು