8:46 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

Covid | ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ; ಭಯ ಬೇಡ: ಮುಖ್ಯಮಂತ್ರಿ

11/06/2025, 21:39

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯ ಮುಖ್ಯಾಂಶಗಳು:


•ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು.

•ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.

•ಕಳೆದ 10ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

•ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

•ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.

•ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

•ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು