8:49 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

11 ವರ್ಷಗಳಲ್ಲಿ ಪ್ರಧಾನಿ ಮೋದಿಯವರಿಂದ ದೇಶದ 27 ಕೋಟಿ ಜನರು ಬಡತನದಿಂದ ಮುಕ್ತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

12/06/2025, 23:03

*ಎರಡು ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಸಿಎಂ ಸಿದ್ದರಾಮಯ್ಯನವರದ್ದೇ ಗ್ಯಾರಂಟಿ ಇಲ್ಲ*

ಮೈಸೂರು(reporterkarnataka.com): ಕಳೆದ ಹನ್ನೊಂದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಸಾಲುಸಾಲು ಅಭಿವೃದ್ಧಿ ಕಾರ್ಯ ನಡೆದಿದೆ. ಆದರೆ ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ ಅವರ 10 ವರ್ಷಗಳ ಆಡಳಿತ ಹಾಗೂ ನರೇಂದ್ರ ಮೋದಿಯವರ 11 ವರ್ಷಗಳ ಆಡಳಿತಕ್ಕೆ ಹೋಲಿಸಿದರೆ, ನಾಲ್ಕು ಪಟ್ಟು ಅಧಿಕ ಅಭಿವೃದ್ಧಿಯಾಗಿದೆ. ಜಗತ್ತಿನಲ್ಲಿ ಆರ್ಥಿಕತೆಯಲ್ಲಿ ಭಾರತ 10-11 ನೇ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಮುಂದೆ ಅದನ್ನು ಮೂರನೇ ಸ್ಥಾನಕ್ಕೆ ಪ್ರಧಾನಿ ಮೋದಿ ಕೊಂಡೊಯ್ಯಲಿದ್ದಾರೆ. ಇಂದಿರಾಗಾಂಧಿ ಕಾಲದಲ್ಲಿ ಗೋದಿಗೆ ಬೇರೆ ದೇಶದ ಮುಂದೆ ಕೈಯೊಡ್ಡುವ ಪರಿಸ್ಥಿತಿ ಇತ್ತು ಎಂದರು.
ಯುಪಿಎ ಕಾಲದಲ್ಲಿ ತಲಾ ಆದಾಯ 6,000 ರೂ. ಇದ್ದರೆ, ಈಗ 20,000 ರೂ. ಆಗಿದೆ. ಆಗ ಗ್ಯಾಸ್‌ ಸಿಲಿಂಡರ್‌ಗೆ 450 ರೂ. ಸಬ್ಸಿಡಿ ಇದ್ದರೆ, ಈಗ 500 ರೂ. ಇದೆ. ಸಬ್ಸಿಡಿ ರಹಿತ ದರ ಆಗ 1,250 ರೂ. ಇದ್ದರೆ, ಈಗ 850 ರೂ. ಇದೆ. ಯುಪಿಎ ಹತ್ತು ವರ್ಷದಲ್ಲಿ 9 ಸಾವಿರಕ್ಕೂ ಅಧಿಕ ಉಗ್ರ ದಾಳಿಯಾಗಿತ್ತು. ಈಗ ಪ್ರತಿ ದಾಳಿ ನಡೆಯುತ್ತಿದೆ. ಮುಂಬೈಯಲ್ಲಿ ದಾಳಿಯಾದಾಗ ಅದಕ್ಕೆ ಪ್ರತ್ಯುತ್ತರ ನೀಡಲೇ ಇಲ್ಲ. ಪಹಲ್ಗಾಮ್‌ನಲ್ಲಿ ದಾಳಿಯಾದಾಗ ಕೂಡಲೇ ಉಗ್ರರ ತಾಣಗಳನ್ನು ನಮ್ಮ ಯೋಧರು ಧ್ವಂಸ ಮಾಡಿದ್ದಾರೆ ಎಂದರು.
ಹಿಂದೆ 387 ಮೆಡಿಕಲ್‌ ಕಾಲೇಜುಗಳಿದ್ದು, ಈಗ 704 ಮೆಡಿಕಲ್‌ ಕಾಲೇಜುಗಳಿವೆ. ಆಗ 74 ವಿಮಾನ ನಿಲ್ದಾಣಗಳಿದ್ದು, ಈಗ 149 ಆಗಿದೆ. ಆಗ ರಾಷ್ಟ್ರೀಯ ಹೆದ್ದಾರಿ 91,000 ಕಿ.ಮೀ. ಇದ್ದಿದ್ದು, ಈಗ 1.45 ಲಕ್ಷ ಕಿ.ಮೀ. ಆಗಿದೆ. 7 ಏಮ್ಸ್‌ ಇದ್ದಿದ್ದು, 22 ಆಗಿದೆ. 82,000 ಮೆಡಿಕಲ್‌ ಸೀಟುಗಳಿದ್ದಿದ್ದು, ಈಗ 1.50 ಲಕ್ಷ ಆಗಿದೆ. ಆಗ ದೇಶದ ಬಜೆಟ್‌ 17 ಲಕ್ಷ ಕೋಟಿ ರೂ. ಇದ್ದರೆ, ಈಗ 50.65 ಲಕ್ಷ ಕೋಟಿ ರೂ. ಆಗಿದೆ. ಎಲ್‌ಇಡಿ ಬಲ್ಬ್‌ಗೆ ಆಗ 450 ರೂ. ಇದ್ದಿದ್ದು, ಈಗ 70 ರೂ. ಗೆ ಸಿಗುತ್ತಿದೆ ಎಂದರು.
ಮೊದಲು ಬೇರೆ ದೇಶದಲ್ಲಿ ಬುಲೆಟ್‌ ರೈಲು ನೋಡುತ್ತಿದ್ದೆವು. ಈಗ ನಮ್ಮ ದೇಶದಲ್ಲೇ 60% ಕಾಮಗಾರಿ ಮುಗಿದು ಮುಂದೆ ಬುಲೆಟ್‌ ರೈಲು ಬರಲಿದೆ. ಕೃಷಿಗೆ ಮೊದಲು 30,000 ಕೋಟಿ ರೂ.ಸಬ್ಸಿಡಿ ಸಿಗುತ್ತಿದ್ದರೆ, ಈಗ 1.27 ಲಕ್ಷ ಕೋಟಿ ರೂ. ಸಬ್ಸಿಡಿ ನೀಡಲಾಗುತ್ತಿದೆ. ಆಗ 14 ಕೋಟಿ ಅಡುಗೆ ಅನಿಲ ಸಂಪರ್ಕವಿದ್ದರೆ, ಈಗ 31 ಕೋಟಿ ಆಗಿದೆ. ಹನ್ನೊಂದು ವರ್ಷಗಳಲ್ಲಿ 4 ಕೋಟಿ ಮನೆ, 11 ಕೋಟಿ ಶೌಚಾಲಯ ನಿರ್ಮಿಸಲಾಗಿದೆ. 27 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್‌ನವರು ಎಂದಿಗೂ ನಕ್ಸಲ್‌ ಪರವಾಗಿದ್ದರು. ಈಗ ನಕ್ಸಲ್‌ ಚಳವಳಿಯನ್ನು ಸಂಪೂರ್ಣವಾಗಿ ಮಟ್ಟಹಾಕುವ ಗುರಿ ಇರಿಸಿಕೊಳ್ಳಲಾಗಿದೆ. ಈಶಾನ್ಯ ರಾಜ್ಯಗಳಲ್ಲೂ ದೊಡ್ಡ ಅಭಿವೃದ್ಧಿ ಕೆಲಸಗಳಾಗಿವೆ. ಜಮ್ಮು-ಕಾಶ್ಮೀರವನ್ನು ಬಿಟ್ಟುಬಿಡೋಣ ಎಂಬ ಮನಸ್ಥಿತಿ ಇತ್ತು. ವಿಶೇಷ ಸ್ಥಾನಮಾನ ರದ್ದಾದ ಬಳಿಕ ಅಲ್ಲಿ ಅಭಿವೃದ್ಧಿ ಹೆಚ್ಚಿದೆ. ಪ್ರವಾಸೋದ್ಯಮದಿಂದ ಅಲ್ಲಿನ ಜನರ ಆದಾಯ ಅಧಿಕವಾಗಿದೆ ಎಂದರು.

*ಸಿದ್ದರಾಮಯ್ಯನವರದ್ದೇ ಗ್ಯಾರಂಟಿ ಇಲ್ಲ:*
ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದೇ ಗ್ಯಾರಂಟಿ ಇಲ್ಲ. ಅವರು ಔಟ್‌ಗೋಯಿಂಗ್‌ ಸಿಎಂ. ಇವರ ಸರ್ಕಾರ ಎರಡು ವರ್ಷದಲ್ಲಿ ಏನೂ ಸಾಧನೆ ಮಾಡಿಲ್ಲ. ಡಿ.ಕೆ.ಶಿವಕುಮಾರ್‌ ಪ್ರತ್ಯೇಕ ಕೋಟೆ ಕಟ್ಟಿಕೊಂಡಿದ್ದಾರೆ. ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಪ್ರತ್ಯೇಕವಾಗಿದ್ದಾರೆ. ಎರಡು ವರ್ಷದಲ್ಲಿ ಒಂದೇ ಒಂದು ನೀರಾವರಿ ಯೋಜನೆ ಜಾರಿಯಾಗಿಲ್ಲ ಎಂದು ದೂರಿದರು.
ಕಾಂಗ್ರೆಸ್‌ನಲ್ಲಿ ಎಲ್ಲರೂ ಸಿಎಂ ಆಗುತ್ತೇನೆಂದು ಹೇಳುತ್ತಿದ್ದಾರೆ. ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಸಿಎಂ ಆಗಲು ಕಾಯುತ್ತಿದ್ದಾರೆ. ಗ್ಯಾರಂಟಿಗಳಿಂದಾಗಿ ಯಾವುದೇ ಕೆಲಸ ನಡೆಯುತ್ತಿಲ್ಲ. ಸರ್ಕಾರವೇ ಬಿದ್ದು ತೊಲಗಲಿ ಎಂದು ಜನರು ಬಯಸುತ್ತಿದ್ದಾರೆ. ಸಿಎಂ ಕುರ್ಚಿಯನ್ನು ನಾಲ್ಕು ಜನರು ಎಳೆಯುತ್ತಿದ್ದಾರೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣವನ್ನು ಬಿಜೆಪಿ ಹೊರಗೆ ಎಳೆದು ತಂದಿದೆ ಎಂದರು.
ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣವಾಗಿದೆ. ಆದರೆ ಪೊಲೀಸರ ಮೇಲೆ ತಪ್ಪು ಹೊರಿಸಲಾಗುತ್ತಿದೆ. ರಾಜ್ಯಪಾಲರನ್ನು ಮುಖ್ಯಮಂತ್ರಿಗಳೇ ಆಹ್ವಾನಿಸಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿಯೇ ಕರೆ ಮಾಡಿ ರಾಜ್ಯಪಾಲರನ್ನು ಆಹ್ವಾನಿಸಿದ್ದಾರೆ. ಆದರೆ ಮೊದಲು ಆ ವಿಷಯವನ್ನು ಹೇಳಿರಲಿಲ್ಲ. ಇವರ ತಪ್ಪು ಮುಚ್ಚಿಹಾಕಲು ಗೋವಿಂದರಾಜು ಅವರ ವಿರುದ್ಧ ಕ್ರಮ ವಹಿಸಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು