1:52 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್; ಮೃತ್ಯು ದವಡೆಯಿಂದ ಪಾಸ್!

12/06/2025, 23:29

ಅಹಮದಾಬಾದ್(reporterkarnataka.com):ಅಹಮದಾಬಾದ್ ಮಹಿಳೆಯೊಬ್ಬರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಏರ್‌ ಇಂಡಿಯಾ ವಿಮಾನ ಅಪಘಾತದಿಂದ ಪಾರಾಗಿದ್ದಾರೆ.
ಅಹಮದಾಬಾದ್‌ನ ಭೂಮಿ ಚೌಹಾಣ್ ಲಂಡನ್‌ಗೆ ಹೊರಟಿದ್ದರು. ಆದರೆ, ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಅಹಮದಾಬಾದ್ ವಿಮಾನ ನಿಲ್ದಾಣವನ್ನು 10 ನಿಮಿಷ ತಡವಾಗಿ ತಲುಪಿದ್ದರು. ಇದರಿಂದ ಅವರಿಗೆ ವಿಮಾನ ಏರಲು ಅನುಮತಿ ನಿರಾಕರಿಸಲಾಗಿತ್ತು. ಇದಾದ ಕೆಲವೇ ನಿಮಿಷಗಳಲ್ಲಿ ವಿಮಾನ ಅಪಘಾತದ ಸುದ್ದಿ ಬಂದಿದ್ದು, ಮಹಿಳೆ, ಮಾಧ್ಯಮಗಳ ಮುಂದೆ ಗದ್ಗದಿತರಾಗಿದ್ದಾರೆ.
ಈ ವಿಚಾರ ಕೇಳಿ ನನಗೆ ಭಯವಾಗಿ ಕೈಕಾಲುಗಳು ನಡುಗಲು ಪ್ರಾರಂಭಿಸಿದವು. ನಾನು ತುಂಬಾ ಹೊತ್ತು ಅದೇ ಆಘಾತದಲ್ಲಿದ್ದೆ. ಕೇವಲ 10 ನಿಮಿಷ ತಡವಾಗಿ ಬಂದಿದ್ದರಿಂದ ವಿಮಾನ ತಪ್ಪಿಸಿಕೊಂಡು ಬದುಕುಳಿದೆ. ನನ್ನ ನೆಚ್ಚಿನ ದೇವರಾದ ಗಣಪತಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನನ್ನ ಗಣಪತಿ ಬಪ್ಪಾ ನನ್ನನ್ನು ಉಳಿಸಿದ ಎಂದು ಹೇಳಿಕೊಂಡಿದ್ದಾರೆ.
ಭೂಮಿ ತಮ್ಮ ಪತಿಯೊಂದಿಗೆ ಲಂಡನ್‌ನಲ್ಲಿ ವಾಸವಾಗಿದ್ದರು. ರಜೆ ಇದ್ದ ಕಾರಣ ಭಾರತಕ್ಕೆ ಬಂದಿದ್ದರು. ಅವರ ಪತಿ ಈಗ ಬ್ರಿಟನ್‌ನಲ್ಲಿದ್ದಾರೆ. ಭೂಮಿ ಎರಡು ವರ್ಷಗಳ ಹಿಂದೆ ಲಂಡನ್‌ಗೆ ತೆರಳಿದ್ದರು. ಇದಾದ ಬಳಿಕ ಮೊದಲ ಬಾರಿಗೆ ಅವರು ಭಾರತಕ್ಕೆ ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು