7:02 PM Saturday11 - October 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ…

ಇತ್ತೀಚಿನ ಸುದ್ದಿ

ಈಶ್ವರ ಖಂಡ್ರೆ – ಕೇರಳ ಅರಣ್ಯ ಸಚಿವ ಸಶೀಂದ್ರನ್ ಭೇಟಿ: ಕೇರಳ ಮೃಗಾಲಯಕ್ಕೆ ತಾಂತ್ರಿಕ ನೈಪುಣ್ಯತೆಯ ವಿನಿಮಯಕ್ಕೆ ಸಮ್ಮತಿ

12/06/2025, 23:56

ಬೆಂಗಳೂರು(reporterkarnataka.com): ಕೇರಳದ ತ್ರಿಶೂರ್ ಜಿಲ್ಲೆಯ ಪುಥೂರ್ ನಲ್ಲಿ ನೂತನವಾಗಿ ಆರಂಭಿಸುತ್ತಿರುವ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಮತ್ತು ಪಕ್ಷಿಗಳ ನಿರ್ವಹಣೆಗೆ ಅಗತ್ಯವಾದ ನೈಪುಣ್ಯತೆ ಮತ್ತು ಜ್ಞಾನ ವಿನಿಮಯಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮ್ಮತಿಸಿದ್ದಾರೆ.
ವಿಕಾಸಸೌಧದಲ್ಲಿಂದು ತಮ್ಮನ್ನು ಭೇಟಿಯಾದ ಕೇರಳ ಅರಣ್ಯ ಸಚಿವ ಎ.ಕೆ. ಸಶೀಂದ್ರನ್, ಕೇರಳ ಅರಣ್ಯ ಇಲಾಖೆಯಿಂದ ಆರಂಭಿಸಲಾಗುತ್ತಿರುವ ಪ್ರಥಮ ಜೈವಿಕ ಉದ್ಯಾನದಲ್ಲಿ ವನ್ಯಜೀವಿಗಳ ನಿರ್ವಹಣೆ ಕುರಿತಂತೆ ತಾಂತ್ರಿಕ ನೈಪುಣ್ಯತೆ ಹಂಚಿಕೊಳ್ಳುವಂತೆ ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.
ವಿಶ್ವ ವಿಖ್ಯಾತ ಮೃಗಾಲಯ ವಿನ್ಯಾಸಕಾರ ಆಸ್ಟ್ರೇಲಿಯಾದ ಜಾನ್ ಸಿಯೋ ಅವರಿಂದ ಜೈವಿಕ ಉದ್ಯಾನದ ವಿನ್ಯಾಸ ಮಾಡಿಸಿದ್ದು, 136.8 ಎಕರೆ ಪ್ರದೇಶದಲ್ಲಿ ಇದು ಸಾಕಾರವಾಗುತ್ತಿದ್ದು, ಬರುವ ಆಗಸ್ಟ್ ಅಂತ್ಯಕ್ಕೆ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಸಶೀಂದ್ರನ್ ಮಾಹಿತಿ ನೀಡಿದರು, ಹೊಸ ಮೃಗಾಲಯಕ್ಕೆ ಕರ್ನಾಟಕದ ಮೃಗಾಲಯಗಳಲ್ಲಿ ಹೆಚ್ಚುವರಿಯಾಗಿರುವ ಕೆಲವು ವನ್ಯಜೀವಿಗಳನ್ನು ನೀಡುವಂತೆಯೂ ಮನವಿ ಮಾಡಿದರು.
ಈ ಭೇಟಿಯ ವೇಳೆ ಕೇರಳ ರಾಜ್ಯದಲ್ಲಿ ಡೀಮ್ಡ್ ಅರಣ್ಯ ಕುರಿತಂತೆ ಕೈಗೊಂಡಿರುವ ಕ್ರಮಗಳು, ಕಸ್ತೂರಿ ರಂಗನ್ ವರದಿಯ ಕುರಿತಂತೆ ಕೈಗೊಳ್ಳಲಾಗಿರುವ ನಿರ್ಣಯಗಳ ಕುರಿತಂತೆಯೂ ಸಮಾಲೋಚಿಸಲಾಯಿತು.

ಕೇರಳ ಅರಣ್ಯ ಇಲಾಖೆಯ ಮುಖ್ಯ ವನ್ಯಜೀವಿ ಪರಿಪಾಲಕ ಪ್ರಮೋದ್ ಜಿ ಕೃಷ್ಣನ್ ಮತ್ತು ಕರ್ನಾಟಕದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಮೀನಾಕ್ಷಿ ನೇಗಿ, ಸುಭಾಷ್ ಮಲ್ಕಡೆ, ಸುನೀಲ್ ಪನ್ವಾರ್, ಸೂರ್ಯ ಸೇನ್ ಮತ್ತಿತರರು ಸಭೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು