9:48 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ಕಣ್ಣಿನ ಮತ್ತು ದಂತ ತಪಾಸಣಾ ಶಿಬಿರ

14/06/2025, 20:57

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ (ರಿ.) ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರವನ್ನು ಜೂನ್ 15ರಂದು ಭಾನುವಾರ ಪೂರ್ವಾಹ್ನ ಸಮಯ 9.30ರಿಂದ ಮಧ್ಯಾಹ್ನ 12.30ರ ವರೆಗೆ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣ, ಉಳ್ಳಾಲ ಇಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಸುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು