2:18 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

14/06/2025, 21:53

*ರಾಜಕೀಯ ಬೆರಸದೇ ವೈಜ್ಞಾನಿಕವಾಗಿ ಕಲ್ಯಾಣ ಕರ್ನಾಟಕದ 42 ಆಸ್ಪತ್ರೆಗಳನ್ನ ಮೇಲ್ದರ್ಜೇಗೇರಿಸಲಾಗುತ್ತಿದೆ*

*ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಮೂಲಸೌಕರ್ಯ ಒದಗಿಸುವುದು ಮಹತ್ವದ ಹೆಜ್ಜೆಯಾಗಿದೆ*


ಯಾದಗಿರಿ(reporterkarnataka.com):
ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು.
ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಆರೋಗ್ಯ ಕ್ಷೇತ್ರ ಅಭಿವೃದ್ಧಿಗೆ 857 ಕೋಟಿಯಷ್ಟು ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಲು ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇಂಥಹ ಐತಿಹಾಸಿಕ ನಿರ್ಣಯ ಬಿಜೆಪಿಯವರ ಕಲ್ಪನೆಯಲ್ಲೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
24 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ, 10 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೇರಿಸುವುದು, ಹೊಸದಾಗಿ 7 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 4 ಸಮುದಾಯ ಆರೋಗ್ಯ ಕೇಂದ್ರಗಳ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಅಲ್ಲದೇ 30 ಹಾಸಿಗೆಯ 25 ಸಮುದಾಯ ಆರೋಗ್ಯ ಕೇಂದ್ರಗಳನ್ನು 50 ಹಾಸಿಗೆಗೆ ಏರಿಕೆ ಸೇರಿದಂತೆ 6 ಸಮುದಾಯ ಆರೋಗ್ಯ ಕೇಂದ್ರಗಳನ್ನ 100 ಬೆಡ್ ಆಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುವುದು. 9 ತಾಲೂಕು ಆಸ್ಪತ್ರೆಗಳನ್ನ 150 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೇರಿಸಲಾಗುತ್ತದೆ. 2 ತಾಲೂಕು ಆಸ್ಪತ್ರೆಗಳನ್ನು 200 ಬೆಡ್ ಆಸ್ಪತ್ರೆಗಳನ್ನಾಗಿ ನಿರ್ಮಿಸುವುದರ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ರು ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕೆಲಸಗಳ ಬಗ್ಗೆ ಟೀಕೆ ಮಾಡುವ ಬಿಜೆಪಿಯವರು ಒಮ್ಮೆ ಕಣ್ತೆರದು ನೋಡಲಿ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಆರೋಗ್ಯ ಆವಿಷ್ಕಾರದಂತಹ ಕಾರ್ಯಕ್ರಮವನ್ನ ಬಿಜೆಪಿಯವರಿಂದ ನೀಡಲು ಸಾಧ್ಯವೇ.. ಅವರು ಈ ರೀತಿಯ ಯೋಜನೆಗಳನ್ನ ಕಲ್ಪನೆ ಕೂಡ ಮಾಡಲ್ಲ ಟೀಕಿಸಿದರು. ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಇಷ್ಟೊಂದು ಮೊತ್ತದ ಯೋಜನೆ ನೀಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನ ಸಲ್ಲಿಸಿದ ಸಚಿವ ದಿನೇಶ್ ಗುಂಡೂರಾವ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜಯ್ ಸಿಂಗ್ ಅವರು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು