8:00 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೇಂದ್ರ ಸರ್ಕಾರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ

16/06/2025, 18:10

ದಾವಣಗೆರೆ(reporterkarnataka.com): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು.ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಸರ್ಕಾರ ಜನಗಣತಿಯನ್ನು 27ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದರು.
ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.

*ಕಾಯ್ದೆಯ ಪ್ರಕಾರ ಮರುಗಣತಿ:* ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು