1:02 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

New Delhi | ಇರಾನ್ ಜತೆ ಸಂಘರ್ಷ: ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಕೇಂದ್ರ ಸಚಿವ ಕುಮಾರಸ್ವಾಮಿ ಮಾತುಕತೆ

16/06/2025, 18:18

ನವದೆಹಲಿ(reporterkarnataka.com): ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಬೆಂಗಳೂರಿನಿಂದ ನವದೆಹಲಿಗೆ ಭಾನುವಾರ ಸಂಜೆ ವಾಪಸ್ಸಾದ ಕೇಂದ್ರ ಸಚಿವರು, ತಮ್ಮ ಅಧಿಕೃತ ನಿವಾಸದಿಂದ ಇಸ್ರೇಲ್‌ ನಲ್ಲಿ ಸಿಲುಕಿರುವ ಕನ್ನಡಿಗರ ಜತೆ ಮಾತನಾಡಿದರು.
ಮಾತುಕತೆ ಸಮಯದಲ್ಲಿ ಸಚಿವರು, ಅವರೆಲ್ಲರ ಯೋಗಕ್ಷೇಮ ವಿಚಾರಿಸಿದರು ಮತ್ತು ಭಾರತ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.
ನಮ್ಮ ಜನರು ಸುರಕ್ಷಿತವಾಗಿ ಮತ್ತು ತ್ವರಿತವಾಗಿ ತಾಯ್ನಾಡಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಸಚಿವಾಲಯದೊಂದಿಗೆ ಈ ವಿಷಯವನ್ನು ತಕ್ಷಣವೇ ಚರ್ಚಿಸುವುದಾಗಿ ಸಚಿವರು ಹೇಳಿದರು.
ವಿಡಿಯೋ ಕರೆಯ ಮೂಲಕ ಮಾತನಾಡಿದ ಎಲ್ಲಾ ಕನ್ನಡಿಗರು, ತಾವು ಸುರಕ್ಷಿತರಾಗಿದ್ದೇವೆ ಮತ್ತು ಟೆಲ್ ಅವೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದಾರೆ ಎಂದು ಸಚಿವರಿಗೆ ತಿಳಿಸಿದರು. “ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ” ಎಂದು ಸಚಿವರಿಗೆ ಮಾಹಿತಿ ನೀಡಿದರಲ್ಲದೆ, ಇದಕ್ಕಾಗಿ ರಾಯಭಾರ ಕಚೇರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಅಲ್ಲದೆ, ಸಚಿವ ಕುಮಾರಸ್ವಾಮಿ ಅವರೂ ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿಯ ಪ್ರಯತ್ನಗಳನ್ನು ಶ್ಲಾಘಿಸಿದರು ಹಾಗೂ ಇಂಥ ಕಠಿಣ ಸಮಯದಲ್ಲಿ ಅಧಿಕಾರಿಗಳ ಬದ್ಧತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ವಿದೇಶದಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ತನ್ನ ಎಲ್ಲವನ್ನೂ ಮಾಡುತ್ತಿದೆ ಎಂದು ಸಚಿವರು ಒತ್ತಿ ಹೇಳಿದರು.

ಪ್ರಸ್ತುತ ಸಂಘರ್ಷದ ವೇಳೆ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದೆ. ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಮರಳುವುದಕ್ಕೆ ತುರ್ತು ಕ್ರಮ ವಹಿಸಿ, ವಿದೇಶ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದ್ದೇನೆ. ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರಕಾರವು ಸಂಘರ್ಷಪೀಡಿತ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಬಗ್ಗೆ ಎಲ್ಲಾ ರೀತಿಯ ತುರ್ತು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದೇನೆ. ಇಂತಹ ಕಠಿಣ ಸಂದರ್ಭದಲ್ಲಿ ನಮ್ಮ ನಾಗರಿಕರಿಗೆ ಸಕಾಲಿಕ ನೆರವು ನೀಡಿದ್ದಕ್ಕಾಗಿ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಪ್ರಯತ್ನಗಳು ಶ್ಲಾಘನೀಯ.

-ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವರು

ಇತ್ತೀಚಿನ ಸುದ್ದಿ

ಜಾಹೀರಾತು