9:33 PM Friday3 - October 2025
ಬ್ರೇಕಿಂಗ್ ನ್ಯೂಸ್
ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ

ಇತ್ತೀಚಿನ ಸುದ್ದಿ

ಅಡ್ಯಾರ್‌: ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡು ನುಂಗಿ 10 ತಿಂಗಳ ಹಸುಳೆ ದಾರುಣ ಸಾವು

17/06/2025, 13:08

ಮಂಗಳೂರು(reporterkarnataka.com): ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ವೆನ್ಲಾಕ್ ನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ನಗರದ ಹೊರವಲಯದ ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಮಗು ಬೀಡಿ ತುಂಡು ನುಂಗಿತ್ತು. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಭಾನುವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.
*ಪತಿಯ ನಿರ್ಲಕ್ಷ್ಯವೇ ಕಾರಣ:*
‘ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ನಿರ್ಲಕ್ಷಿಸಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ’ ಎಂದು ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು