12:06 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಹೈಕೋರ್ಟ್‌ನಿಂದ ಸ್ವಯಂ ಪ್ರೇರಣೆಯ ಪ್ರಕರಣ, ರಾಜ್ಯ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

17/06/2025, 18:20

ಬೆಂಗಳೂರು(reporterkarnataka.com):ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಾಗುವುದು. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.
ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು