3:57 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ಮಲೇಶಿಯಾ ತೆರಳಿದ ಸ್ಪೀಕರ್ ಯು.ಟಿ.ಖಾದರ್ ಫರೀದ್

18/06/2025, 09:59

ಕೌಲಲಾಂಪುರ(reporterkarnataka.com): ಮಲೇಶಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡಿರುವ, ಕರ್ನಾಟಕ ವಿಧಾನ ಸಭೆ ಸ್ಪೀಕರ್ ಮತ್ತು ಕಾಮನ್‌ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆಯ ಜಂಟಿ ಅಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು‌ ಇಂದು‌ ಜನ ಪ್ರತಿನಿಧಿಗಳ ಸಭೆ (ದಿವಾನ್ ರಖ್ಯತ್)ನ ಸಭಾಧ್ಯಕ್ಷರು ಮತ್ತು ಕಾಮನ್‌ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್, ಮಲೇಶಿಯಾದ ಜಂಟಿ ಅಧ್ಯಕ್ಷರಾದ ಡಾ.ಜೋಹರಿ ಬಿನ್ ಅಬ್ದುಲ್ ಅವರನ್ನು ಕೌಲಾಲಾಂಪುರದಲ್ಲಿರುವ ಸಂಸತ್ ಭವನದಲ್ಲಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು ಸಂಸದೀಯ ವ್ಯವಹಾರಗಳು ಹಾಗೂ ಪ್ರಜಾಪ್ರಭುತ್ವ ತತ್ವಗಳ ಬಗ್ಗೆ ಪರಸ್ಪರ ವಿಚಾರ ವಿನಿಮಯ ಮಾಡಿದರು. ಅಲ್ಲದೆ ಭವಿಷ್ಯದಲ್ಲಿ ಕರ್ನಾಟಕ ಹಾಗೂ ಮಲೇಶಿಯಾದ ರಾಜಕೀಯ, ಸಂಸದೀಯ ವ್ಯವಹಾರಗಳು ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಕಾಯ್ದುಕೊಳ್ಳುವ ಬಗ್ಗೆ ಸಹ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಂಬಂಧಪಟ್ಟ ಇತರೆ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು