5:06 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ

21/06/2025, 15:11

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಬಳಿ ಇರುವ ಯುದ್ಧ ಸ್ಮಾರಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಎನ್ ಸಿ ಸಿ ನೌಕಾಪಡೆ ಘಟಕದ ಕೆಡೆಟ್‍ಗಳು , ಎನ್ ಸಿಸಿ ಅಧಿಕಾರಿಗಳು ಮತ್ತು ಸೈನಿಕರ ಜೊತೆಗೂಡಿ ಈ ವರ್ಷದ ಯೋಗ ದಿನವನ್ನು ಕ ಆಚರಿಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ನೌಕಾಪಡೆಯ ನಿವೃತ್ತ ಪಿಒ ಸುಧೀರ್ ಪೈ ಯೋಗ ದಿನದ ಮಹತ್ವ ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾತನಾಡಿದರು. ಸಶಸ್ತ್ರ ಪಡೆಗಳಿಗೆ ಸೇರುವ ಪ್ರಸ್ತುತತೆಯನ್ನು ಅವರು ತಿಳಿಸಿದರು.
ವಿಶ್ವ ವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಣಪತಿ ಗೌಡ ಅವರು ಯೋಗದಿಂದ ಶರೀರಕ್ಕೆ ಉಂಟಾಗುವ ಉಪಯೋಗದ ಬಗ್ಗೆ ತಿಳಿಸಿದರು .
ಈ ವರ್ಷದ ವಿಶ್ವ ಯೋಗ ದಿನದ ದ್ಯೇಯ ವಾಕ್ಯವಾಗಿರುವ ‘ಒಂದು ಭೂಮಿ ಮತ್ತು ಒಂದು ಆರೋಗ್ಯಕ್ಕಾಗಿ ಯೋಗ’ ಕಾರ್ಯಕ್ರಮದಲ್ಲಿ ಕೆಡೆಟ್ ಗಳು ಸಕ್ರಿಯವಾಗಿ ಭಾಗವಹಿಸಿ, ಯೋಗದ ಒಟ್ಟಾರೆ ಯೋಗಕ್ಷೇಮ , ಸಾಮರಸ್ಯಕ್ಕೆ ಸಹಕಾರ. ದೈಹಿಕ ಭಂಗಿಗಳು, ಉಸಿರಾಟದ ತಂತ್ರಗಳು ಮತ್ತು ಧ್ಯಾನವನ್ನು ಸಂಯೋಜಿಸಿ ಮನಸ್ಸು-ದೇಹವನ್ನು ಆರೋಗ್ಯವಾಗಿಡಲು ಸಹಕಾರಿಯಾಗುವ ಬಗ್ಗೆ ತಿಳಿದರು .
ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಕಮಾಂಡರ್ ಪ್ರೊ. ಯತೀಶ್‌ ಕುಮಾರ್ ಸ್ವಾಗತಿಸಿದರು , ಮೇಜರ್‌ ಡಾ. ಜಯರಾಜ್‌ ವಂದಿಸಿದರು.
ಯೋಗ ಪ್ರದರ್ಶನದಲ್ಲಿ ವಿವಿ ಕಾಲೇಜಿನ 10 ಕೆಡೆಟ್ ಗಳು ಮತ್ತು 14 ಜನ ಸೈನಿಕರು ಉಪಸ್ಥಿತರಿದ್ದರು. ಕೆಡೆಟ್‌ಗಳು ಸೂರ್ಯ ನಮಸ್ಕಾರ, ಪದ್ಮಾಸನ, ಧನುರಾಸನ , ನಟರಾಜಾಸನವನ್ನು ಪ್ರದರ್ಶಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು