7:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ವಿದ್ಯುತ್ ಕಂಬಕ್ಕೆ ಡಿಕ್ಕಿ: 50 ಅಡಿ ದೂರ ಕಂಬವನ್ನು ಎಳೆದೊಯ್ದ ಕಾರು; ಚಾಲಕನ ಪ್ರಾಣ ಉಳಿಸಿದ ಏರ್ ಬ್ಯಾಗ್

21/06/2025, 20:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯೊಡೆದು ಸುಮಾರು 50 ಅಡಿ ದೂರ ಕಂಬವನ್ನು ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ.
ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ಓಪನ್ ಆದ ಏರ್ ಬ್ಯಾಗ್
ಚಾಲಕನ ಜೀವ ಉಳಿಸಿದೆ.
ಸಣ್ಣ ಕಾರಿನ ದೊಡ್ಡ ಏರ್ ಬ್ಯಾಗ್ ಅಪಘಾತ ಸಂದರ್ಭದಲ್ಲಿ ಮಹತ್ತರ ಪಾತ್ರವಹಿಸಿದೆ.


ಚಿಕ್ಕಮಗಳೂರು ನೋಂದಣಿಯ ಸೆಲೋರಿಯಾ ಕಾರು ಇದಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ನೆಲದಲ್ಲಿ ಹೂತಿದ್ದ ವಿದ್ಯುತ್ ಕಂಬ ಕಿತ್ತು ಬಂದಿದೆ. ಕಂಬಕ್ಕೆ ಹಾಕಿದ್ದ ಗೌಂಡಿಂಗ್ ವೈರ್ ಕೂಡ ಕಿತ್ತು ಕಂಬದ ಜೊತೆಯೇ ಹೋಗಿದೆ.
ಕಂಬ ಮುರಿದು ಬೀಳುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಟ್ ಆಗಿರುವುದರಿಂದ ಭಾರೀ ಅನಾಹುತ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಭೀಕರ ಅಪಘಾತಕ್ಕೀಡಾಗಿದೆ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು