11:50 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕತಾರಿನಲ್ಲಿ ಹಣ್ಣಿನ ರಾಜನ ದರ್ಬಾರು: ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ!

23/06/2025, 21:18

ಕತಾರು(reporterkarnataka.com): ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ.
50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು ಎಲ್ಲರ ಇಂದ್ರಿಯಗಳನ್ನು ಆಕರ್ಷಿಸಿತು.


ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೊಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್ , ಶ್ರೀಲಂಕಾ , ಬಾಂಗ್ಲಾದೇಶ, ಫಿಲಿಪಿನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವರು.
ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ದಿನಾಂಕ 12 ಜೂನ್ 2025ರಂದು ಪ್ರಾರಂಭವಾಗಿ 21 ಜೂನ್ 2025ರಂದು ಸಂಪನ್ನಗೊಂಡಿತು. ನಿಜಕ್ಕೂ ಅದ್ದೂರಿ ಯಶಸ್ಸು ಕಂಡದ್ದು ಹಣ್ಣಿನ ರಾಜನೆ!

ಇತ್ತೀಚಿನ ಸುದ್ದಿ

ಜಾಹೀರಾತು