3:31 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಚಿಕ್ಕಮಗಳೂರು ಕೋರ್ಟಿಗೆ ಹಾಜರು: ಕೇರಳ ಪೊಲೀಸರ ಕ್ರಮ

26/06/2025, 11:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಕ್ಸಲ್ ಹೋರಾಟದ ಹಾದಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಮೇಲೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಹಲವು ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ಸಂಬಂಧ ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಿ.ಜಿ.ಕೃಷ್ಣಮೂರ್ತಿ ಮೇಲೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕಾಂಬಿಂಗ್, ಮಲೆನಾಡಿಗರ ಬೆಂಬಲ ಕಡಿಮೆಯಾದ ಹಿನ್ನೆಲೆ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು. ಅವರು ಶರಣಾದ ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಸಿಎಂ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು