1:02 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಲೋಕಸಭೆ ಸ್ಪೀಕರ್ ಅವರನ್ನು ಕರ್ನಾಟಕ ಸ್ಪೀಕರ್ ಖಾದರ್ ಭೇಟಿ: 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನದ ಚರ್ಚೆ

26/06/2025, 13:16

ನವದಹಲಿ(reporterkarnataka.com): ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷರಾದ ಓಂ.ಬಿರ್ಲಾ ಅವರನ್ನು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು 2025ರ ಸೆಪ್ಟೆಂಬರ್ 9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.


ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಕಾಮನ್ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.
ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 8, 2025 ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು.
ಕರ್ನಾಟಕ ಇತಿಹಾಸದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಆಯೋಜಿಸಲು ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಲೋಕಸಭಾಧ್ಯಕ್ಷರು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು