6:09 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ರೈತರ ಭೂಮಿ ಸ್ವಾಧೀನದ ವಿರುದ್ದದ ಹೋರಾಟವನ್ನು ಹತ್ತಿಕ್ಕಲು ಮುಂದಾದ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

26/06/2025, 20:51

ಮಂಗಳೂರು(reporterkarnataka.com): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚೆನ್ನರಾಯಪಟ್ಟಣದ 13 ಗ್ರಾಮಗಳ ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿರುವುದರ ವಿರುದ್ದ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಕರ್ನಾಟಕ ರಾಜ್ಯ ಸರಕಾರವು ರಾಜ್ಯ ಮಟ್ಟದ ರೈತ ಕಾರ್ಮಿಕ ನಾಯಕರನ್ನು ಬಂಧಿಸಿರುವುದನ್ನು ಖಂಡಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಬಳಿಯಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಜಂಟಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ನಾಯಕರಾದ ಕೆ ಯಾದವ ಶೆಟ್ಟಿಯವರು, ಮಣ್ಣಿನ ಮಗ, ರೈತನ ಮಗನೆಂದು ಬೊಗಳೆ ಬಿಟ್ಟು ರೈತರ ಹೆಸರಿನಲ್ಲಿ ರಾಜಕಾರಣ ನಡೆಸಿ ಅಧಿಕಾರಕ್ಕೇರಿದ ಕಾಂಗ್ರೆಸ್ ಮುಲಾಜಿಲ್ಲದೆ ರೈತರ ಭೂಮಿಯನ್ನು ಕಬಳಿಸಲು ಹೊರಟಿದೆ. ಕಳೆದ 1180 ದಿನಗಳಿಂದ ನಿರಂತರವಾಗಿ ಹೋರಾಟದಲ್ಲಿ ನಿರತರಾದ ರೈತರ ಬಳಿ ಮಾತನಾಡುವ ಕನಿಷ್ಠ ಸೌಜನ್ಯವೂ ರಾಜ್ಯ ಸರಕಾರಕ್ಕಿಲ್ಲದೆ ಇರುವುದು ಅತ್ಯಂತ ಖಂಡನೀಯ ವಿಚಾರವಾಗಿದೆ ಎಂದು ಹೇಳಿದರು.
AITUC ಜಿಲ್ಲಾ ನಾಯಕರಾದ ಬಿ ಶೇಖರ್ ರವರು ಮಾತನಾಡಿ, ದೇಶಕ್ಕೆ ಅನ್ನ ನೀಡುವ ರೈತರ ಸಂಕಷ್ಟವನ್ನು ಅರಿಯದ ಕಾಂಗ್ರೆಸ್ ಸರಕಾರ ರಾಜ್ಯದ ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಲು ಭಾರೀ ಉತ್ಸುಕವಾಗಿದೆ. ದೇಶದ ಕಾರ್ಪೊರೇಟ್ ಕಂಪೆನಿಗಳ ಪರವಾಗಿ ತುತ್ತೂರಿ ಬಾರಿಸುವುದರಲ್ಲಿ ಕಾಂಗ್ರೆಸ್ ಬಿಜೆಪಿಯ ಮಧ್ಯೆ ಯಾವ ವ್ಯತ್ಯಾಸವೂ ಇಲ್ಲ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಕಳೆದ ಬಿಜೆಪಿ ಸರಕಾರ ಅಧಿಕಾರದಲ್ಲಿರುವಾಗಲೇ ಬೀದಿಗಿಳಿದ ದೇವನಹಳ್ಳಿಯ ರೈತರು ತಮ್ಮ ಭೂಮಿಯ ರಕ್ಷಣೆಗಾಗಿ ಬಿಜೆಪಿ ಸರಕಾರದ ವಿರುದ್ಧ ಪ್ರಬಲವಾಗಿ ಹೋರಾಡಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಅಧಿಕಾರಕ್ಕೇರಿದ ಕಾಂಗ್ರೆಸ್ ಬಿಜೆಪಿ ಮಾಡಿದ ರೈತ ವಿರೋಧಿ ತೀರ್ಮಾನವನ್ನು ಧಿಕ್ಕರಿಸಿ ರೈತರಿಗೆ ನ್ಯಾಯ ನೀಡುವ ಬದಲು ಅದೇ ತೀರ್ಮಾನವನ್ನು ಮುಂದುವರಿಸುವುದಾದರೆ ರೈತರ ಭೂಮಿಯ ಪ್ರಶ್ನೆಯಲ್ಲಿ ಕಾಂಗ್ರೆಸ್ ನ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಹೇಳಿದರು.
ಪ್ರತಿಭಟನೆಯನ್ನುದ್ದೇಶಿಸಿ ರಾಜ್ಯ ರೈತ ಸಂಘದ ಜಿಲ್ಲಾ ನಾಯಕರಾದ ಸನ್ನಿ ಡಿಸೋಜ, CITU ಜಿಲ್ಲಾ ನಾಯಕರಾದ ಸುಕುಮಾರ್ ತೊಕ್ಕೋಟು, AITUC ಜಿಲ್ಲಾ ನಾಯಕರಾದ ಸೀತಾರಾಮ ಬೇರಿಂಜರವರು ಮಾತನಾಡಿದರು.

ಪ್ರತಿಭಟನೆಯಲ್ಲಿ CITU ನಾಯಕರಾದ ಜೆ ಬಾಲಕೃಷ್ಣ ಶೆಟ್ಟಿ,ಯೋಗೀಶ್ ಜಪ್ಪಿನಮೊಗರು, ಸುಂದರ ಕುಂಪಲ, ಅಶೋಕ್ ಶ್ರೀಯಾನ್, ನಾಗೇಶ್ ಕೊಟ್ಯಾನ್, ಇಬ್ರಾಹಿಂ ಮದಕ, AITUC ಮುಖಂಡರಾದ ವಿ ಕುಕ್ಯಾನ್,ಪ್ರಭಾಕರ್ ರಾವ್, ತಿಮ್ಮಪ್ಪ ಕಾವೂರು,ಕ್ರಷ್ಣಪ್ಪ ಭಾಸ್ಕರ್, AIKS ನಾಯಕರಾದ ಕ್ರಷ್ಣಪ್ಪ ಸಾಲ್ಯಾನ್, ಸದಾಶಿವದಾಸ್, ಶೇಖರ್ ಕುಂದರ್, DYFI ಮುಖಂಡರಾದ ಮುನೀರ್ ಕಾಟಿಪಳ್ಳ, ಬಿ. ಕೆ. ಇಮ್ತಿಯಾಜ್, ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್, ತಯ್ಯುಬ್ ಬೆಂಗರೆ,ರಾಜ್ಯ ರೈತ ಸಂಘದ ಸ್ಟೀವನ್ ಡಿಸೋಜ, ಮಹಿಳಾ ಸಂಘಟನೆಯ ನಾಯಕರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ,ಅಸುಂತ ಡಿಸೋಜ,ಮಾಧುರಿ ಬೋಳಾರ,ಜಯಲಕ್ಷ್ಮಿ, ದಲಿತ ನಾಯಕರಾದ ಸದಾಶಿವ ಪಡುಬಿದ್ರೆ,ಕಮಲಾಕ್ಷ ಬಜಾಲ್, ತಿಮ್ಮಯ್ಯ ಕೊಂಚಾಡಿ, ಸಮುದಾಯದ ವಾಸುದೇವ ಉಚ್ಚಿಲ್, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಶೇಖರ್ ವಾಮಂಜೂರು,ಕರಿಯ ಕೆ, ಬೀದಿಬದಿ ವ್ಯಾಪಾರಸ್ಥರ ಸಂಘದ ಹಸನ್ ಕುದ್ರೋಳಿ, ವಿಜಯ ಜೈನ್,ಮುಜಾಫರ್ ಅಹಮದ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು