8:26 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ ನೋಂದಣಿ ಕಡ್ಡಾಯ: ಜಿಲ್ಲಾಧಿಕಾರಿ ಖಡಕ್ ಆದೇಶ

27/06/2025, 13:16

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆ ಮಂಗಳವಾರ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿಯಲ್ಲಿ ಕಡ್ಡಾಯವಾಗಿ ನೋಂದಾವಣೆ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ ಕಾಲಮಿತಿಯೊಳಗೆ ನೋಂದಣಿ ಪಡೆಯದ ಮಾಲೀಕರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಣಿಗಳ ರಕ್ಷಣೆ ಒಂದು ಮಹತ್ವದ ಕಾರ್ಯವಾಗಿದ್ದು, ಜಿಲ್ಲೆಯಲ್ಲಿ ಪ್ರಾಣಿಗಳ ಮೇಲಾಗುವ ದೌರ್ಜನ್ಯವನ್ನು ತಡೆಗಟ್ಟಿ ಅವುಗಳನ್ನು ರಕ್ಷಿಸಬೇಕು. ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸುವುದು ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಿರಾಶ್ರಿತ ಪ್ರಾಣಿಗಳಿಗೆ ಅಗತ್ಯ ಶುಶ್ರೂಷೆ ಕೊಡುವ ನಿಟ್ಟಿನಲ್ಲಿ ಮಂಗಳೂರು ತಾಲೂಕಿನ ಬೊಂಡಂತಿಲ ಗ್ರಾಮದಲ್ಲಿ ಪ್ರಾಣಿ ಮಿತ್ರ ಆಸ್ಪತ್ರೆ ತೆರೆಯುವ ಯೋಜನೆ ಅನುಷ್ಠಾನದ ಕುರಿತು ಹಾಗೂ ರಸ್ತೆ ಅಪಘಾತಗಳಲ್ಲಿ ಇತರೆ ಕಾರಣಗಳಿಂದ ಸತ್ತ ಪ್ರಾಣಿಗಳನ್ನು ಯಾರೂ ಸಹ ಮುಟ್ಟುವುದಿಲ್ಲ. ಅವುಗಳ ಮೃತದೇಹ ಅಲ್ಲಿಯೇ ಕೊಳೆಯುತ್ತಿರುತ್ತವೆ. ಪ್ರಾಣಿಗಳ ಅಂತ್ಯಸಂಸ್ಕಾರಕ್ಕೆ ಸ್ಮಶಾನ ಸೌಲಭ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಮೂಕಪ್ರಾಣಿಗಳ ಬಗ್ಗೆ ಅನುಕಂಪ ಮತ್ತು ಮಾನವೀಯತೆಯ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸಾರ್ವಜನಿಕರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮದ ಮೂಲಕ ಮಾಹಿತಿ ನೀಡಲಾಗುತ್ತಿದೆ ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆಗಳೊಂದಿಗೆ ಕೈಜೋಡಿಸಿ ಪ್ರಾಣಿ ಕಲ್ಯಾಣ ಮಂಡಳಿಯಿಂದ ಸ್ಥಾಪಿಸಲ್ಪಟ್ಟ ಪ್ರಾಣಿ ಕಲ್ಯಾಣ ಕಾನೂನು ಜಾರಿಯ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಎಸಿಪಿ ಗೀತಾ ಕುಲಕರ್ಣಿ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಸಮಿತಿಯ ಸದಸ್ಯೆ ಸುಮ ಆರ್. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು