8:04 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Karnataka CM | ಆರೆಸ್ಸೆಸ್ಸಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

28/06/2025, 20:53

ಬೆಂಗಳೂರು(reporterkarnataka.com): ಆರೆಸ್ಸೆಸ್ಸಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.
ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.
ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ. ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ. ಜಾತ್ಯತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸoವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.

*ಹುಲಿಗಳ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮ*
ಹುಲಿಗಳ ಸಾವಿನ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು