7:04 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಕೃಷ್ಣಾ ನದಿಯಿಂದ 1.10.000 ಸಾವಿರ ಕ್ಯುಸೆಕ್ ನೀರು ಬಿಡುಗಡೆ

29/06/2025, 16:14

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಬಸವಸಾಗರ ಜಲಾಶಯದ 30 ಕ್ರಸ್ಟ ಗೇಟ್‌ಗಳನ್ನು ತೆರದು 1,00,085 ಕ್ಯೂಸೆಕ್ಸ್ ಹಾಗೂ 6,000 ಸಾವಿರ ಕ್ಯುಸೆಕ್ ನಷ್ಟು ನೀರನ್ನು ಎಂ.ಪಿ.ಸಿ.ಎಲ್ ನಿಂದ ಹರಿಬಿಡಲಾಗುತ್ತಿದೆ. ಭಾನುವಾರ ಆಲಮಟ್ಟಿ ಶಾಸ್ತ್ರೀ ಸಾಗರದಿಂದ 1.10.000 ಸಾವಿರ ಕ್ಯುಸೆಕ್ ಪ್ರಮಾಣದಷ್ಟು ನೀರಿನ ಒಳಹರಿವು ಬರುತ್ತಿದ್ದು, ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ.
ಕೃಷ್ಣಾ ಪ್ರದೇಶದಲ್ಲಿ ಜಲಾನಯನ ನಿರಂತರ ಮಳೆಯಾಗುತ್ತಿರುವದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಪ್ರತಿ ಉಭಯ ಗಂಟೆಗೊಮ್ಮೆ ಜಲಾಶಯಗಳ ಅಧಿಕಾರಿಗಳು ನದಿಗೆ ನೀರು ಹರಿಸುವ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಒಂದೊಮ್ಮೆ ಒಳಹರಿವು ಹೆಚ್ಚಾದರೆ ಹೊರ ಹರಿವು ಹೆಚ್ಚಿಸಲಾಗುತ್ತದೆ. ಒಳಹರಿವು ತಗ್ಗಿದರೆ ಹೊರ ಹರಿವು ಕಡಿಮೆ ಆಗುತ್ತದೆ. ಹಿಗಾಗಿ ನದಿ ತೀರದ ಗ್ರಾಮಗಳ ಜನರು ಎಚ್ಚರದಿಂದ ಇರಬೇಕು ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ವಿಜಯ ಅರಳಿಯವರು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಮಾಹಿತಿಯಂತೆ ಗರಿಷ್ಠ 492.25 -ರ ಎತ್ತರದಲ್ಲಿ 33.313 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 492.25 ಮೀಟರಗೆ ನೀರು ಬಂದು ತಲುಪಿದ್ದು, ಮಾಹಿತಿ 26.74 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು