12:06 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್, ಇಬ್ಬರು ಸಬ್​ ಇನ್ಸ್​ಪೆಕ್ಟರ್​ಗಳ ಸಸ್ಪೆಂಡ್

30/06/2025, 22:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್​ಪೆಕ್ಟರ್ ಮತ್ತು ಇಬ್ಬರು ಸಬ್​ ಇನ್ಸ್​ಪೆಕ್ಟರ್​ಗಳನ್ನು ಅಮಾನತು ಮಾಡಲಾಗಿದೆ. ಕುಶಾಲನಗರ ಟೌನ್ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್, ಇಲವಾಲ ಸಬ್​​ ಇನ್ಸ್​​ಪೆಕ್ಟರ್​​ ಮಹೇಶ್‌ ಕುಮಾರ್ ಹಾಗೂ ಜಯಪುರ ಪೊಲೀಸ್​ ಠಾಣೆಯ ಸಬ್ ಇನ್ಸ್​ಪೆಕ್ಟರ್​ ಪ್ರಕಾಶ್ ಎತ್ತಿನಮನೆಯವರನ್ನು ಅಮಾನತು ಮಾಡಲಾಗಿದೆ. ಕೊಲೆ ಪ್ರಕರಣದ ವಿಚಾರಣಾಧಿಕಾರಿಗಳಾದ ಇವರು ಸುಳ್ಳು ಚಾರ್ಜ್​​ಶೀಟ್ ಹಾಕಿ ನಿರಪರಾಧಿಯನ್ನು ಜೈಲಿಗೆ ಕಳುಹಿಸಿದ್ದರು.
ಕುಶಾಲನಗರ ಸಮೀಪದ ಬಸವನಹಳ್ಳಿ ಹೊಸ ಬಡಾವಣೆಯ ಗಾಂಧಿ ಎಂಬುವರ ಪುತ್ರ ಸುರೇಶ್​ ಅಲಿಯಾಸ್ ಕುರುಬರ ಸುರೇಶ್ ಎಂಬುವನ ವಿರುದ್ಧ ಅಂದು ಬೆಟ್ಟದಪುರ ಪೊಲೀಸ್​ ಠಾಣೆ ಇನ್ಸ್‌ಪೆಕ್ಟರ್ ಆಗಿದ್ದ ಬಿ.ಜಿ ಪ್ರಕಾಶ್ ಸುಳ್ಳು ಚಾರ್ಜ್​ಶೀಟ್​​ ಸಲ್ಲಿಸಿದ್ದರು. ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದಾಗ ಸುಳ್ಳು ಚಾರ್ಜ್​​ಶೀಟ್​ ಹಾಕಿರುವುದು ಬೆಳಕಿಗೆ ಬಂದಿದೆ.

*ಏನಿದು ಪ್ರಕರಣ?:*
2020ರ ನವೆಂಬರ್​ 12 ರಂದು ಬೆಟ್ಟದಪುರದಲ್ಲಿ ಓರ್ವ ಮಹಿಳೆಯ ಮೃತದೇಹ ಸಿಕ್ಕಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಬಲವಾದ ಏಟಿನಿಂದ ಮಹಿಳೆ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖವಾಗಿತ್ತು. ಹೀಗಾಗಿ ಅದು ಕೊಲೆ ಎಂದು ಸ್ಪಷ್ಟಪವಾಗಿತ್ತು. ಈ ಮೃತ ಮಹಿಳೆ ಯಾರು? ಕೊಲೆ ಮಾಡಿದವರು ಯಾರು? ಎಂಬ ಪ್ರಶ್ನೆಗಳು ಮೂಡಿದ್ದವು.
ಈ ನಡುವೆ ಬಸವನಹಳ್ಳಿಯ ಸುರೇಶ್​ ಅಲಿಯಾಸ್ ಕುರುಬರ ಸುರೇಶ್ ಅವರು 2020ರ ನವೆಂಬರ್​​ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್​ ಎಂಬಾತನೇ ಕಾರಣ ಎಂದು ತಿಳಿಸಿದ್ದರು. ಬಳಿಕ, ಮಲ್ಲಿಗೆಯ ತಾಯಿ ಗೌರಿ ಅವರು ಮಗಳು ಕೊಲೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಸುರೇಶ್​ ಅವರನ್ನೇ ಆರೋಪಿಯಾಗಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅಂದಿನ ವಿಚಾರಣಾಧಿಕಾರಿಗಳು ಕಟ್ಟುಕಥೆ ಕಟ್ಟಿದ್ದರು. ಬೆಟ್ಟದಪುರ ಪೊಲೀಸ್​ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಬಿ.ಜಿ ಪ್ರಕಾಶ್ ನ್ಯಾಯಾಲಯಕ್ಕೆ ಸುಳ್ಳು ಚಾರ್ಜ್​ಶೀಟ್​​ ಸಲ್ಲಿಸಿದ್ದರು.

*ಕೋರ್ಟ್​ನಲ್ಲಿ ಸತ್ಯ ಬಯಲು:*
ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈಗಾಗಲೇ 9 ಜನ ಸಾಕ್ಷಿದಾರರ ವಿಚಾರಣೆಯೂ ನಡೆದಿತ್ತು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುವ ಸಂದರ್ಭದಲ್ಲಿ, ನಾನು (ಸುರೇಶ್) ನನ್ನ ಪತ್ನಿಯನ್ನು ಕೊಂದಿಲ್ಲ, ಆಕೆ ಬದುಕಿದ್ದಾಳೆ ಎಂದು ಸುರೇಶ್​ ಅವರು ಪದೇ ಪದೆ ಮನವಿ ಮಾಡುತ್ತಿದ್ದರು.
ಅಷ್ಟೇ ಅಲ್ಲದೆ ನಮ್ಮ ತಾಯಿ ಬದುಕಿದ್ದಾಳೆ, ನಮ್ಮ ತಾಯಿ ಸತ್ತಿಲ್ಲ ಎಂದು ಸುರೇಶ್​ ಮತ್ತು ಮಲ್ಲಿಗೆ ದಂಪತಿಯ ಮಕ್ಕಳಾದ ಕೃಷ್ಣ, ಕೀರ್ತಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದರು. ಅಕ್ಕಪಕ್ಕದ ಮನೆಯವರೂ ಸಹಿತ ಮಲ್ಲಿಗೆ ಸತ್ತಿಲ್ಲ ಎಂದು ಸಾಕ್ಷ್ಯ ಹೇಳಿದ್ದರು.
ಸತ್ತಿದ್ದಾಳೆಂದು ಬಿಂಬಿಸಲಾಗಿದ್ದ ಮಲ್ಲಿಗೆ 2025ರ ಏಪ್ರಿಲ್ 2ರಂದು ಜಡ್ಜ್ ಮುಂದೆ ಹಾಜರಾಗಿದ್ದರು. ಕೋರ್ಟ್​ನಲ್ಲಿ ಪೊಲೀಸರು ಹೇಳಿದ್ದು ಕಟ್ಟುಕತೆ ಎಂದು ಸಾಬೀತಾಗಿತ್ತು. ಆದರೆ, ಪತ್ನಿಯನ್ನು ಕೊಲೆ ಮಾಡಿದ ಆರೋಪ ಹೊತ್ತಿದ್ದ ಸುರೇಶ್​ ಎರಡು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದಾರೆ. ಇದೀಗ, ಸತ್ಯ ಹೊರ ಬಂದಿರುವುದರಿಂದ ಸುರೇಶ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುರೇಶ್ ವಿರುದ್ಧ ಸುಳ್ಳು ಕೇಸ್ ಹಾಕಿದ್ದ ಮೂವರು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು