7:46 AM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಲೊರೆಟ್ಟೋ ಹಿಲ್ಸ್ ಕ್ಲಬ್ ಗೆ ಜಿಲ್ಲಾಮಟ್ಟದ ತ್ರಿವಳಿ ಪ್ರಶಸ್ತಿ ಗರಿ: ಜು. 6ರಂದು ಪದಗ್ರಹಣ

01/07/2025, 20:18

ಬಂಟ್ವಾಳ(reporterkarnataka.com): ಕಳೆದ 8 ವರ್ಷಗಳ ಹಿಂದೆ ಅವಿಲ್ ಮಿನೇಜಸ್ ಸ್ಥಾಪಕಾಧ್ಯಕ್ಷತೆಯಲ್ಲಿ ಆರಂಭ ಗೊಂಡ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಜಿಲ್ಲೆಯ ಅತ್ಯುನ್ನತ ಡೈಮಂಡ್ ಪ್ಲಸ್ ಸಹಿತ ಜಿಲ್ಲಾ ಮಟ್ಟದ 3 ಪ್ರಶಸ್ತಿ ಗಳಿಸಿಕೊಂಡಿದ್ದು, ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜುಲೈ 6ರಂದು ಸಂಜೆ ಗಂಟೆ 6.30ಕ್ಕೆ ಲೋರೆಟ್ಟೋ ಹಿಲ್ಸ್ ಸಭಾಂಗಣ ದಲ್ಲಿ ನೆರವೇರಲಿದೆ.
ಕಾರ್ಯಕ್ರಮದಲ್ಲಿ ರೋಟರಿ ಮಾಜಿ ಜಿಲ್ಲಾ ಗವರ್ನರ್ ಕೇಶವ ಎಚ್. ಆರ್., ಕ್ಲಬ್ಬಿನ ಸಲಹೆಗಾರ ಮಾಜಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್, ಸಹಾಯಕ ಗವರ್ನರ್  ಸಿಎ ಉಮೇಶ್ ರಾವ್ ಮಿಜಾರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದೆ.
*ಪ್ರಶಸ್ತಿ:* ಕಳೆದ ಸಾಲಿನಲ್ಲಿ ಕ್ಲಬ್ಬಿನ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ದಕಟ್ಟೆ ಮತ್ತು ಕಾರ್ಯದರ್ಶಿ ರಾಜೇಶ್ ಶೆಟ್ಟಿ ಸೀತಾಳ ನೇತೃತ್ವದಲ್ಲಿ  ನಡೆಸಿದ್ದ ವಿವಿಧ ಸೇವಾ ಚಟುವಟಿಕೆ ಸೇರಿದಂತೆ ರೋಟರಿ ಸಂಸ್ಥೆಗೆ ಸದಸ್ಯರು ನೀಡಿದ ದೇಣಿಗೆ ಮತ್ತು ಇಮೇಜ್ ವೃದ್ಧಿಗೊಳಿಸಿದ ಪರಿಣಾಮ ಜಿಲ್ಲಾಮಟ್ಟದ 3
ಪ್ರಶಸ್ತಿಗಳು ಒಲಿದು ಬಂದಿದೆ. ಕ್ಲಬ್ಬಿನ ಮಾಜಿ ಅಧ್ಯಕ್ಷೆ ಶ್ರುತಿ ಮಾಡ್ತಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಮಹಿಳಾ ಸಮ್ಮೇಳನಕ್ಕೂ ಪ್ರಶಸ್ತಿ ದೊರೆತಿದೆ.
*ಕ್ಲಬ್ಬಿನ ವಿಶೇಷತೆ:*
ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಸ್ಥಾಪನೆಗೊಂಡ ಪ್ರಥಮ ವರ್ಷದಲ್ಲೇ ಸ್ವಂತ ಕಟ್ಟಡ ನಿರ್ಮಿಸಿದೆ. ಕಳೆದ 8 ವರ್ಷಗಳ ಅವಧಿಯಲ್ಲಿ  ವಿವಿಧ ಅಂಗನವಾಡಿಗಳಿಗೆ ಮೂಲ ಸೌಕರ್ಯ ಸೇರಿದಂತೆ ಹಲವು ಶಾಲೆಗಳಿಗೆ ಹಣ್ಣಿನ ಗಿಡ ಸಹಿತ ಪುಸ್ತಕ, ಬ್ಯಾಗ್, ಶುದ್ಧ ಕುಡಿಯುವ ನೀರಿನ ಘಟಕ, ಧ್ವನಿವರ್ಧಕ, ರಂಗಮಂಟಪ ಒದಗಿಸಿದೆ. ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ಬಡ ಕುಟುಂಬಕ್ಕೆ ಮನೆ ಹಸ್ತಾಂತರ ಹೀಗೆ ಸುಮಾರು ರೂ. 1.5  ಕೋಟಿಗೂ ಮಿಕ್ಕಿ ಮೊತ್ತ ವಿನಿಯೋಗಿಸಲಾಗಿದೆ. ರೋಟರಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕಂಬಳ ಕೂಟ ಆಯೋಜಿಸಿದ್ದು, ಇದು ಮುಂದೆಯೂ ಹೀಗೆ ಮುಂದುವರಿಯಲಿದೆ ಎಂಬ ಭರವಸೆ ನಮ್ಮಲಿದೆ.
ಸುದ್ದಿಗೋಷ್ಠಿಯಲ್ಲಿ
ಕ್ಲಬ್ಬಿನ ಸ್ಥಾಪಕಾಧ್ಯಕ್ಷ ಅವಿಲ್ ಮಿನೇಜಸ್, ಕ್ಲಬ್ಬಿನ ಮಾಜಿ ಜಿಲ್ಲಾ ಸಹಾಯಕ ಗವರ್ನರ್ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ನಿಯೋಜಿತ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ
ನಿಕಟ ಪೂರ್ವ ಅಧ್ಯಕ್ಷ ಸುರೇಶ್ ಶೆಟ್ಟಿ ಸಿದ್ದಕಟ್ಟೆ, ನಿಯೋಜಿತ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಲೋರೆಟ್ಟೋ ಹಿಲ್ಸ್, ನಿಯೋಜಿತ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು