8:38 PM Wednesday2 - July 2025
ಬ್ರೇಕಿಂಗ್ ನ್ಯೂಸ್
Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ…

ಇತ್ತೀಚಿನ ಸುದ್ದಿ

ಜರ್ಮನಿಯ ನಾರ್ತ್ ರೈನ್-ವೆಸ್ಟ್‌ಫಾಲಿಯಾ, ಡಸೆಲ್ಡಾರ್ಫ್‌ಗೆ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಭೇಟಿ: ಕೌಶಲ್ಯ ವಿನಿಯಮ ಬಗ್ಗೆ ಒಪ್ಪಂದ

02/07/2025, 19:57

ಡಸೆಲ್ಡಾರ್ಫ್ (reporter Karnataka.com): ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ನೇತೃತ್ವದ ನಿಯೋಗ ಜರ್ಮನಿ ಪ್ರವಾಸ ಕೈಗೊಂಡಿದೆ.
ಸಚಿವರ ನೇತೃತ್ವದ ನಿಯೋಗವು, ಜರ್ಮನಿಯ ನಾರ್ತ್ ರೈನ್-ವೆಸ್ಟ್‌ಫಾಲಿಯಾ (ಎನ್‌ಆರ್‌ಡಬ್ಲ್ಯೂ), ಡಸೆಲ್ಡಾರ್ಫ್‌ ಸೇರಿದಂತೆ ಜರ್ಮನಿಯ ಪ್ರಮುಖ ಪ್ರದೇಶಗಳಿಗೆ ಭೇಟಿ ನೀಡಿ, ಕೌಶಲ್ಯಾಭಿವೃದ್ಧಿ ಹಾಗೂ ಕೌಶಲ್ಯ ವಿನಿಮಯ, ಉದ್ಯೋಗವಾಕಾಶ ಸೇರಿದಂತೆ ಹಲವಾರು ವಿಷಯಗಳ ಕುರಿತು ಅಲ್ಲಿನ ನಿಯೋಗಮಟ್ಟದ ಸಮಾಲೋಚನೆ ಸಭೆ ನಡೆಸಲಿದೆ.

ಯಾಂತ್ರೀಕೃತ ಕೈಗಾರಿಕೆ, ಮೆಕಾಟ್ರಾನಿಕ್ಸ್ ಮತ್ತು ಸ್ಮಾರ್ಟ್ ಉತ್ಪಾದನೆಯಂತಹ ಕ್ಷೇತ್ರಗಳಲ್ಲಿ ಅಪ್ರೆಂಟಿಸ್‌ಶಿಪ್, ಕೌಶಲ್ಯ ಸಹಯೋಗದ ಕುರಿತು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನೇತೃತ್ವದ ನಿಯೋಗ ಅಧ್ಯಯನ ನಡೆಸಿ ಕೆಲವು ಮಹತ್ವದ ಒಪ್ಪಂದ ಕೂಡ ಮಾಡಿಕೊಳ್ಳುವ ನಿರೀಕ್ಷೆ ಇದೆ.

*ಷ್ನೇಯ್ಡರ್ ಎಲೆಕ್ಟ್ರಿಕ್, ಡಸೆಲ್ಡಾರ್ಫ್:*
ಬೆಂಗಳೂರಿನ ಜಿಟಿಟಿಸಿಯ ವ್ಯವಸ್ಥಾಪಕ ನಿರ್ದೇಶಕರು ವೈ.ಕೆ.ದಿನೇಶ್ ಕುಮಾರ್
ಮತ್ತು ಹಿರಿಯ ಅಧಿಕಾರಿಗಳ ನಿಯೋಗ ಡಸೆಲ್ಡಾರ್ಫ್‌ನಲ್ಲಿ ಜರ್ಮನ್ ನರ್ಸಿಂಗ್‌ ಅಪ್ರೆಂಟಿಶಿಪ್‌, ಕರ್ನಾಟಕ ಮತ್ತು ಎನ್‌ಆರ್‌ಡಬ್ಲ್ಯೂ ನಡುವೆ ರಚನಾತ್ಮಕ ಕೌಶಲ್ಯ ವಲಸೆ ಮಾರ್ಗವನ್ನು ರೂಪಿಸುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಯಿತು.
ಜಿಟಿಟಿಸಿಯ ತಾಂತ್ರಿಕ ಪಠ್ಯಕ್ರಮವನ್ನು ಜರ್ಮನ್ ತರಬೇತಿ ಮಾನದಂಡಗಳೊಂದಿಗೆ ಅಳವಡಿಸಿಕೊಳ್ಳುವುದು, ಕರ್ನಾಟಕದ ಯುವಕರಿಗೆ ರಚನಾತ್ಮಕ ಪೂರ್ವ-ನಿರ್ಗಮನ ತರಬೇತಿಯನ್ನು ಪ್ರಾಯೋಗಿಕವಾಗಿ ನೀಡುವ ಬಗ್ಗೆ ಅಧಿಕಾರಿಗಳು ಸಮಾಲೋಚನೆ ನಡೆಸಿದರು.

*ಸನಾ ಕ್ಲಿನಿಕೆನ್:*
ಕರ್ನಾಟಕದ ತರಬೇತಿ ಪಡೆದ ನರ್ಸಿಂಗ್ ವೃತ್ತಿಪರರಿಗೆ ಪ್ಫ್ಲೆಜ್ ಆಸ್‌ಬಿಲ್ಡಂಗ್ (ನರ್ಸಿಂಗ್ ಅಪ್ರೆಂಟಿಸ್‌ಶಿಪ್‌ಗಳು) ಮತ್ತು ನೈತಿಕ ವಲಸೆ ಚೌಕಟ್ಟುಗಳಿಗೆ ಮಾರ್ಗಗಳನ್ನು ಅನ್ವೇಷಿಸಲು ಸಚಿವರು ಆರೋಗ್ಯ ಕ್ಷೇತ್ರದ ಪ್ರತಿನಿಧಿಗಳನ್ನು ಸಹ ಭೇಟಿಯಾದರು.
ಕರ್ನಾಟಕ ಮತ್ತು ನಾರ್ತ್ ರೈನ್-ವೆಸ್ಟ್‌ಫಾಲಿಯಾ ನಡುವೆ ಸುರಕ್ಷಿತ, ವಿಶ್ವಾಸಾರ್ಹ ಮತ್ತು ದೀರ್ಘಕಾಲೀನ ಕೌಶಲ್ಯಣ ಪಾಲುದಾರಿಕೆ, ಕರ್ನಾಟಕದ ಸಾವಿರಾರು ಯುವಕರು ಜರ್ಮನಿಯಲ್ಲಿ ಉತ್ತಮ ಗುಣಮಟ್ಟದ ವೃತ್ತಿಪರ ತರಬೇತಿ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲು ಅನುವು ಮಾಡಿಕೊಡುವ ಕುರಿತು ಡಾ.‌ ಪಾಟೀಲ್‌ ಅಲ್ಲಿನ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು