ಇತ್ತೀಚಿನ ಸುದ್ದಿ
ಆರಿದ್ರಾ ಮಳೆಯ ಅಬ್ಬರ: ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ- ಕಾಲೇಜು ಗಳಿಗೆ ರಜೆ ಘೋಷಣೆ
03/07/2025, 09:26

ರಶ್ಮಿ ಶ್ರೀಕಾಂತ್ ನಾಯಕ್
ತೀರ್ಧಹಳ್ಳಿ ಶಿವಮೊಗ್ಗ
info.reporterkarnataka@gmail.com
ತೀರ್ಥಹಳ್ಳಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಂಜಾಗೃತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ.
ಕಳೆದ 24 ಗಂಟೆಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮಳೆಯ ಜೊತೆಗೆ ವಿಪರೀತ ಗಾಳಿ ಸಹ ಬೀಸುತ್ತಿದೆ. ಇದರಿಂದ ಮಕ್ಕಳಿಗೆ ಆರೋಗ್ಯದಲ್ಲಿ ತೊಂದರೆಯಾಗುವ ಮುನ್ಸೂಚನೆಯಿಂದ ಇಂದು ( 03-7-2025 ರ ಗುರುವಾರ) ರಜೆ ಘೋಷಿಸಲಾಗಿದೆ.
ಈಗ ನೀಡಿರುವ ರಜೆಯನ್ನು ಮುಂದಿನ ರಜೆಯ ದಿನದಂದು
ಸರಿಪಡಿಸಿಕೊಳ್ಳಲು ತಿಳಿಸಲಾಗಿದೆ.