ಇತ್ತೀಚಿನ ಸುದ್ದಿ
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು; ಸಂಚಾರ ಬಂದ್
03/07/2025, 09:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಲೆನಾಡಿನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ
ತುಂಗಾ ನದಿ ನೀರಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದ್ದು,
ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನೆರೆ ನೀರು ನುಗ್ಗಿ ಸಂಚಾರ ಬಂದ್ ಆಗಿದೆ.
ಕೆರೆಕಟ್ಟೆ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
ನೀರು ರಸ್ತೆಗೆ ಬಂದ ಕಾರಣ ಬ್ಯಾರಿಕೇಡ್ ಹಾಕಿ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ. ವಾಹನಗಳಿಗೆ ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.