8:56 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Madikeri | ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ: ಕಾರ್ಮಿಕರ ಮೇಲೆ ನಿಗಾ ವಹಿಸಲು ಎಸ್ಪಿ ಸೂಚನೆ

03/07/2025, 12:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಹಲವು ತಿಂಗಳಿನಿಂದ ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ.
ಹೌದು. ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ನಾಪೋಕ್ಲು ಸೇರಿದಂತೆ ಕೊಡಗಿನ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ವಾರದ ಸಂತೆಗಳಲ್ಲಿ ಹೊಸ ಮುಖಗಳೇ ಹೆಚ್ಚಾಗಿ ಕಂಡುಬರುತ್ತಿವೆ. ಸಂತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಆರಂಭಿಸಿ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ರೂಮ್ ಬಾಯ್ ತನಕವೂ ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳಲ್ಲೂ ಹೊರ ರಾಜ್ಯದವರೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ನಿಗಾ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕೊಡಗಿಗೆ ಬರುವ ವಲಸೆ ಕಾರ್ಮಿಕರು ಜಿಲ್ಲಾದ್ಯಂತ ಚದುರಿ ಹೋಗುತ್ತಿದ್ದಾರೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಕೆಲಸ ನೀಡುವ ಕಾಫಿ ತೋಟದ ಮಾಲೀಕರು, ಕಾರ್ಮಿಕರನ್ನು ಕರೆ ತರುವ ದಲ್ಲಾಳಿಗಳು ಆಯಾ ಕಾರ್ಮಿಕರ ಪೂರ್ವಾಪರ ವಿಚಾರಿಸಿ ಬಳಿಕ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ.
ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೊಡಗು ಪೊಲೀಸ್ ಅಧೀಕ್ಷಕರಾದ ರಾಮರಾಜನ್ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು