ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು
04/07/2025, 23:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೆರೆಯಲ್ಲಿ ಈಜಲು ಹೋದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ
ಚಿಕ್ಕಮಗಳೂರು ನಗರದ ಕುಂಬಾರಕಟ್ಟೆ ಕೆರೆಯಲ್ಲಿ ನಡೆದಿದೆ.
ಮೃತ ಬಾಲಕನನ್ಮು ರಂಜಿತ್ (15) ಎಂದು ಗುರುತಿಸಲಾಗಿದೆ. ಬಾಲಕ ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ನಿವಾಸಿಯಾಗಿದ್ದ.
ಶಾಲೆಗೆ ಬಂದಿದ್ದ ಬಾಲಕ ಶಾಲೆ ರಜೆ ಅಂತ ಈಜಲು ಹೋಗಿದ್ದ.
ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಶಾಲೆಗಳಿಗೆ ಜಿಲ್ಲಾಡಳಿತ ರಜೆ ನೀಡಿತ್ತು.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶವ ಮೇಲೆತ್ತಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.