3:10 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Kudla | ದಕ್ಷಿಣ ಕನ್ನಡ ಜಿಲ್ಲೆ ಮರು ನಾಮಕರಣ ಕೂಗಿಗೆ ಶಾಸಕ ವೇದವ್ಯಾಸ ಕಾಮತ್ ಧ್ವನಿ

05/07/2025, 18:03

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಮರುನಾಮಕರಣ ಮಾಡುವ ಬಗ್ಗೆ ಹೋರಾಟಗಳು ತೀವ್ರಗೊಂಡಿದ್ದು, ಸರ್ವ ಧರ್ಮ-ಪಕ್ಷ-ಸಂಘಟನೆಗಳು ಒಗ್ಗೂಡಿರುವ “ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ” ಸಂಚಾಲಕನಾಗಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತೇನೆಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ಪೋರ್ಚುಗೀಸರು ಬ್ರಿಟಿಷರ ಕಾಲದಲ್ಲಿ ತುಳುನಾಡು ಹೋಗಿ ಸೌತ್ ಕೆನರಾ ಆಯ್ತು, ಸ್ವತಂತ್ರ ಭಾರತದಲ್ಲಿ ರಾಜ್ಯ ವಿಂಗಡಣೆ ಸಂದರ್ಭದಲ್ಲಿ ಸೌತ್ ಕೆನರಾ ದಕ್ಷಿಣ ಕನ್ನಡವಾಗಿ ಬದಲಾಯಿತು, ಹಾಗಾಗಿ ಈ ನೆಲಕ್ಕೂ ದಕ್ಷಿಣ ಕನ್ನಡ ಹೆಸರಿಗೂ ಯಾವುದೇ ಸಂಬಂಧವಿಲ್ಲ ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಜಿಲ್ಲೆಗೆ ಮರುನಾಮಕರಣದ ಬಗ್ಗೆ ಹೋರಾಟಗಳು ನಿನ್ನೆ ಮೊನ್ನೆ ಆರಂಭವಾಗಿದ್ದಲ್ಲ ಸುಮಾರು ನೂರು ವರ್ಷಗಳ ಹಿಂದಿನಿಂದಲೂ ಆಗ್ರಹವಿದೆ. ಜಿಲ್ಲೆಯ ಹೆಸರು ಬದಲಾವಣೆಯಾದಲ್ಲಿ ತುಳು
ಭಾಷೆಯ ಹೋರಾಟಕ್ಕೂ ಇನ್ನಷ್ಟು ಪುಷ್ಟಿ ಸಿಗಲಿದೆ. ಈಗಾಗಲೇ ನಮ್ಮ ಜಿಲ್ಲೆಗೆ ಆರ್ಥಿಕವಾಗಿ ಬಹಳಷ್ಟು ಅನ್ಯಾಯವಾಗುತ್ತಿದ್ದರೂ ಸಹಿಸಿಕೊಂಡಿದ್ದೇವೆ. ಆದರೆ ಇಲ್ಲಿನ ಸಂಸ್ಕೃತಿಯ ಮೇಲೆ ಅನ್ಯಾಯವಾಗುವುದನ್ನು ಸ್ವಾಭಿಮಾನಿಗಳಾದ ತುಳುವರು ಸಹಿಸುವುದಿಲ್ಲ.
ಎಂದರು.
ಉತ್ತರ ಪ್ರದೇಶ, ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಸ್ಥಳೀಯ ಹೆಸರುಗಳ ಮರುನಾಮಕರಣಕ್ಕೆ ಯಾವೆಲ್ಲಾ ಕ್ರಮಕೈಗೊಳ್ಳಲಾಗಿದೆಯೋ ಅದೇ ರೀತಿಯಲ್ಲೇ ಕಾನೂನು ಬದ್ಧವಾಗಿ ಈ ಪ್ರಕ್ರಿಯೆಗಳು ನಡೆಯಲಿ, ಅದಕ್ಕೆ ಅಗತ್ಯವಿರುವ ಯಾವುದೇ ಕಾರ್ಯಕ್ಕೂ ಶಾಸಕನಾಗಿ, ಸಮಿತಿಯ ಸಂಚಾಲಕನಾಗಿ ನಾನು ಬದ್ಧನಾಗಿದ್ದೇನೆ. ಇದೇ ಸಂದರ್ಭದಲ್ಲಿ ತುಳುನಾಡಿನ ಪ್ರತಿಯೊಂದು ಮನೆಯ, ಪ್ರತಿಯೊಬ್ಬ ತುಳುವನೂ ಈ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ವಿನಂತಿಸುತ್ತಾ, ಕೂಡಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಸಮಸ್ತ ತುಳುವರ ಅಭಿಪ್ರಾಯಕ್ಕೆ ಬೆಲೆ ನೀಡಬೇಕು ಎಂದು ಶಾಸಕರು ಸರ್ಕಾರವನ್ನು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು