12:14 AM Monday21 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Mangaluru | ಕೊಟ್ಟಾರಚೌಕಿ ರಾಷ್ಟ್ರೀಯ ಹೆದ್ದಾರಿ ಬಳಿ ಸಿಂಧೂರ ವಿಜಯ ಪಾರ್ಕ್ ಉದ್ಘಾಟನೆ

05/07/2025, 21:50

ಮಂಗಳೂರು(reporterkarnataka.com): ನಗರದ ಕೊಟ್ಟಾರಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ
ಉದ್ಯಾನವನದ ಉದ್ಘಾಟನೆ ಶನಿವಾರ ನಡೆಯಿತು.


ಶಾಸಕ ಡಾ. ಭರತ್ ಶೆಟ್ಟಿ ವೈ. ಅಧ್ಯಕ್ಷತೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು 42. 35 ಲಕ್ಷ ರೂಪಾಯಿ ವೆಚ್ಚದಲ್ಲಿ ಸೈನಿಕರನ್ನು ಸ್ಮರಿಸುವ ಪಾರ್ಕ್ ನಿರ್ಮಾಣಗೊಂಡಿದೆ. ಶಾಸಕರಾದ ಡಾ. ಭರತ್ ಶೆಟ್ಟಿ ವೈ ಅವರು ತಮ್ಮ ಕ್ಷೇತ್ರದಾದ್ಯಂತ ಅತ್ಯುತ್ತಮವಾದ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಾ ಬರುತ್ತಿದ್ದು ಈ ಯೋಜನೆಯನ್ನು ಕೂಡ ಕಾರ್ಯಗತಗೊಳಿಸುವಲ್ಲಿ ಶ್ರಮಿಸಿದ್ದಾರೆ. ಮುಡಾದ ಸದಸ್ಯರು ಅಧಿಕಾರಿಗಳು ಪಾಲಿಕೆಯ ಸದಸ್ಯರು ಅಧಿಕಾರಿಗಳ ಸಮನ್ವಯದೊಂದಿಗೆ ಉತ್ತಮವಾಗಿ ನಿರ್ಮಾಣಗೊಂಡಿದೆ ಎಂದು ಶ್ಲಾಘಿಸಿದರು.
ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಮೊದಲ ಅವಧಿಯಲ್ಲಿ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದೆವು.
ಸ್ಥಳೀಯ ಕಾರ್ಪೊರೇಟರ್, ಸಾರ್ವಜನಿಕರು ಇಲ್ಲಿನ ಜಂಕ್ಷನ್ ನಲ್ಲಿ ಸೈನಿಕರ ಸ್ಮಾರಕವನ್ನ ನಿರ್ಮಿಸುವ ಬಗ್ಗೆ ಬೇಡಿಕೆಯನ್ನು ಇಟ್ಟಿದ್ದರು.ವಸೈನಿಕರ ತ್ಯಾಗ ಬಲಿದಾನವನ್ನು ಸದಾ ಸ್ಫರಿಸಿಕೊಳ್ಳುವ ನಿಟ್ಟಿನಲ್ಲಿ, ಅವರು ದೇಶದ ರಕ್ಷಣೆಗಾಗಿ ತಮ್ಮ ಕುಟುಂಬವನ್ನು ತೊರೆದು ಗಾಡಿ ಭಾಗದಲ್ಲಿ ಇದ್ದುಕೊಂಡು ದೇಶದ ಜನತೆ ಸುರಕ್ಷತೆಯಿಂದ ಜೀವನ ನಡೆಸಲು ತ್ಯಾಗವನ್ನೇ ಮಾಡುತ್ತಿದ್ದಾರೆ. ಹೀಗಾಗಿ ಈ ಉದ್ಯಾನವನ ನಿರ್ಮಾಣದಲ್ಲಿ ನಮಗೂ ಸಂತೃಪ್ತಿಯನ್ನು ಉಂಟುಮಾಡಿದೆ ಎಂದರು.
ನಗರ ಪ್ರವೇಶಿಸುವ ಜಂಕ್ಷನ್ ನಲ್ಲಿ ಈ ಉದ್ಯಾನವನ ನಿರ್ಮಾಣಗೊಂಡಿರುವುದರಿಂದ ಹೆಚ್ಚು ಆಕರ್ಷಣೀಯವಾಗಿದೆ.
ಈ ಒಂದು ಪಾರ್ಕನ್ನು ಸೈನಿಕರಿಗೆ ಹಾಗೂ ಅವರ ಕುಟುಂಬಗಳಿಗೆ ಅರ್ಪಿಸುವುದರ ಜೊತೆಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಸದಸ್ಯರು ಅಧಿಕಾರಿಗಳಿಗೆ ಈ ಸಂದರ್ಭ ಶ್ಲಾಘನೆಯನ್ನ ವ್ಯಕ್ತಪಡಿಸುತ್ತೇನೆ ಎಂದರು.
ಭಾರತವು ಪಾಕಿಸ್ತಾನದ ಉಗ್ರರ ಮೇಲಿನ ಕಾರ್ಯಾಚರಣೆಯ ಸಂದರ್ಭ ಜಯವನ್ನು ಪಡೆದಿರುವುದರ ಸೈನಿಕರ ಶೌರ್ಯದ ಕುರಿತಾಗಿ ಸಿಂಧೂರ ಕಾರ್ಯಾಚರಣೆ ಸದಾ ನೆನಪಿನಲ್ಲಿ ಉಳಿಯುವಂತಾಗಲು ಸಿಂಧೂರ ವಿಜಯ ಹೆಸರನ್ನ ನಾಮಕರಣ ಮಾಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಾಧಿಕಾರದ ಸದಸ್ಯರಾದ ನೀರಾಜ್ ಚಂದ್ರ ಪಾಲ್
ಅಬ್ದುಲ್ ಜಲೀಲ್, ಸುಮನ್ ದಾಸ್, ಸಬಿತಾ ಮಿಸ್ಕಿತ್,
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮೊಹಮ್ಮದ್ ನಜೀರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಅಶ್ವಿನಿ, ಸಹಾಯಕ ಅಭಿಯಂತರರಾದ ಅಕ್ಬರ್ ಭಾಷಾ, ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯರಾದ ಮನೋಜ್ ಕುಮಾರ್ ಕಿರಣ್ ಕುಮಾರ್ ಕೊಡಿಕಲ್, ರಂಜಿನಿ ಕೋಟ್ಯಾನ್, ಬಿಜೆಪಿ ಮುಖಂಡರಾದ ಸಿತೇಶ್ ಕೊಂಡೆ, ಆಶಿತ್ ನೋಂಡ, ಹರಿಪ್ರಸಾದ್ ಶೆಟ್ಟಿ, ಉಮೇಶ್ ಮಾಲರಾಯಸಾನ, ಸಂಜಿತ್ ಶೆಟ್ಟಿ, ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು