8:23 PM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ಬಣಕಲ್‌ ಬಸ್ ತಂಗುದಾಣಕ್ಕೆ ಶಾಸಕಿ ನಯನಾ ಮೋಟಮ್ಮ ಚಾಲನೆ: ದಶಕಗಳ ನಾಗರಿಕರ ಕನಸು ಕೊನೆಗೂ ನನಸು

07/07/2025, 20:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಣಕಲ್ ಗ್ರಾಮದಲ್ಲಿ ಬಹು ನಿರೀಕ್ಷಿತ ಬಸ್ ತಂಗುದಾಣಕ್ಕೆ ಕೊನೆಗೂ ಚಾಲನೆ ದೊರೆತಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರು ಸೋಮವಾರ ಉದ್ಘಾಟನೆ ನೆರವೇರಿಸಿದರು.
ಇದರೊಂದಿಗೆ ದಶಕಗಳಿಂದ ರಸ್ತೆಬದಿಯಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಕೆಲಸಗಾರರು ಹಾಗೂ ಪ್ರಯಾಣಿಕರಿಗೆ ನಿರಾಶ್ರಿತ ಸ್ಥಿತಿಗೆ ಅಂತ್ಯವಾಯಿತು. ಮಳೆಗಾಲದಲ್ಲಿ ಗಾಳಿ ಮತ್ತು ಮಳೆಯಿಂದ ರಕ್ಷಣೆಗಾಗಿ ಅಂಗಡಿಗಳ ಆಶ್ರಯ ಬೇಕಾಗುತ್ತಿದ್ದ ಸಂದರ್ಭಗಳಿಗೂ ತೆರೆಬಿದ್ದಂತಾಗಿದೆ.
ಶಾಸಕಿ ನಯನ ಮೋಟಮ್ಮ ಮಾತನಾಡಿ, “ಗ್ರಾಮದ ಜನತೆ ಹಲವು ವರ್ಷಗಳಿಂದ ತಂಗುದಾಣದ ಅಗತ್ಯವನ್ನು ಮುಂದಿಟ್ಟು ಬಂದಿದ್ದರು. ಈ ಸಂದರ್ಭದಲ್ಲಿ ತಂಗುದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದು ತಿಳಿಸಿದರು. ಜೊತೆಗೆ ಸಾರ್ವಜನಿಕರು ಸ್ಥಳದ ಸ್ವಚ್ಛತೆ ಕಾಪಾಡುವ ಜವಾಬ್ದಾರಿಯನ್ನು ಹೊಣೆ ಹೊತ್ತುಕೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬಣಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಝರಿನ್, ಉಪಾಧ್ಯಕ್ಷೆ ಬಿ.ಬಿ. ಲೀಲಾವತಿ, ಪಿಡಿಓ ಕೃಷ್ಣಪ್ಪ, ಪಂಚಾಯಿತಿ ಸದಸ್ಯರಾದ.ಅತೀಕ ಬಾನು, ಇರ್ಫಾನ್, ಸಿರಾಜ್,ವಿನಯ್, ಮಧು ಕುಮಾರ್, ಸ್ಥಳೀಯರಾದ ದಿಲ್ದಾರ್ ಬೇಗಂ, ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಸುಬ್ರಮಣ್ಯ, ಕುಂಜಿಮೋಣು, ಪೋಲ್ಸನ್, ಶಿವರಾಮ್ ಶೆಟ್ಟಿ, ಅಜೀದ್, ಸಿದ್ದೀಕ್,ಗೋಪಾಲ ಚಾರ್, ವಿಕ್ರಂ ಗೌಡ, ಸತೀಶ್ ಗೌಡ, ಮೆಲ್ವಿನ್,ಉಮ್ಮಾರ್, ಹೊಸಕೆರೆ ರಮೇಶ್,ಸಬ್ಲಿ ದೇವರಾಜ್,ದೇವಪ್ಪ ಜನಪ್ರತಿನಿಧಿಗಳು,ಊರಿನ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು