12:04 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ ಕೆಲಸಕ್ಕೆ ಸಾರ್ವಜನಿಕರ ಹಿಡಿ ಶಾಪ!

08/07/2025, 13:02

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತೀರ್ಥಹಳ್ಳಿ- ಕೊಪ್ಪ ರಸ್ತೆ ಸಂಪರ್ಕಿಸುವ ತುಂಗಾ ಕಮಾನು ಸೇತುವೆ ಮೇಲೆ ಮಳೆ ಬರುವ ವೇಳೆ ಎರಡು ಅಡಿ ನೀರು ಹರಿಯುತ್ತಿದ್ದು ಇದರಿಂದ ಸೇತುವೆ ಮೇಲೆ ಓಡಾಟ ಮಾಡುವವರಿಗೆ ಮಳೆಯ ಸ್ನಾನದ ಜೊತೆಗೆ ಕೊಳಚೆ ನೀರಿನ ಸ್ನಾನ ಕೂಡ ಆಗುತ್ತಿದೆ.

ಪ್ರವಾಸಿ ಮಂದಿರದಿಂದ ಹರಿದು ಬರುವ ನೀರು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಲ್ಲಿ ಸಣ್ಣ ಮಳೆ ಬಂದರೂ ನೀರು ರಸ್ತೆಯ ಮೇಲೆ ಹರಿದು ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ. ತ್ಯಾಜ್ಯ, ಕೊಳಕು ನೀರು ರಸ್ತೆಯ
ಮೇಲೆ ಹರಿಯುತ್ತಿದ್ದು, ನಡೆದಾಡಲು ಕಷ್ಟಪಡುವಂತಾಗಿದೆ. ಇಲ್ಲಿ ಪಾದಚಾರಿಗಳಿಗೆ ವಾಹನಗಳಿಂದ ಕೊಳಕು ನೀರಿನ ಅಭಿಷೇಕ ಮಾಮೂಲಿ ಎಂಬಂತೆ ಆಗಿದೆ.
ತತ್‌ಕ್ಷಣ ಇಲ್ಲಿ ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ರಸ್ತೆಯಿಂದ ಹರಿದು ಬರುವ ನೀರು ಸೇತುವೆ ಮೇಲೆ ನಿಲ್ಲದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು