ಇತ್ತೀಚಿನ ಸುದ್ದಿ
Home Minister | ಗೃಹ ಸಚಿವ ಡಾ. ಪರವೇಶ್ವರ್ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ; ವಿಶೇಷ ಪೂಜೆ ಸಲ್ಲಿಕೆ
09/07/2025, 11:01

ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.com
ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಪತ್ನಿ ಕನ್ನಿಕಾ ಪರಮೇಶ್ವರಿ ಅವರೊಂದಿಗೆ ಇಂದು ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಗೃಹ ಸಚಿವ ಡಾ. ಪರಮೇಶ್ವರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಇದು ದಿಢೀರ್ ಭೇಟಿಯಾಗಿತ್ತು. ಸ್ವಲ್ಪ ಸಮಯ ಠಾಣೆಯಲ್ಲಿ ಕಳೆದ ಗೃಹಸಚಿವರು ಪೊಲೀಸರ ಕಾರ್ಯವೈಖರಿಯ ಪರಿಶೀಲನೆ ನಡೆಸಿದರು.
ಡಾ.ಪರಮೇಶ್ವರ್ ಅವರು ನಿನ್ನೆ ಮಂಗಳೂರಿಗೆ ಆಗಮಿಸಿದ್ದರು. ಗೃಹ ಸಚಿವರು ದ.ಕ. ಜಿಲ್ಲೆಯ ಶಾಂತಿ ಸೌಹಾರ್ದತೆ ಕುರಿತು ಇಂದು ಮಂಗಳೂರಿನಲ್ಲಿ ಎಲ್ಲ ರಾಜಕೀಯ ಪಕ್ಷ, ಸಂಘ- ಸಂಸ್ಥೆಗಳ ಪ್ರತಿನಿಧಿ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.